Film & EntertainmentKannada NewsKarnataka NewsLatest

*ಖ್ಯಾತ ನಿರ್ದೇಶಕ ಓಂ ಪ್ರಕಾಶ್ ರಾವ್ ವಿರುದ್ಧ ವಂಚನೆ ಆರೋಪ: ದೂರು ದಾಖಲು*

ಕನ್ನಡದ ಖ್ಯಾತ ನಿರ್ದೇಶಕ ಹಾಗೂ ನಟ ಓಂ ಪ್ರಕಾಶ್ ರಾವ್ ವಿರುದ್ಧ ಕೋಟ್ಯ್ಂತರ ರೂಪಾಯಿ ವಂಚನೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂತು ದಾಖಲಾಗಿದೆ.

ಸಿನಿಮಾ ನಿರ್ಮಾಣದ ಹೆಸರಿನಲ್ಲಿ 3.85 ಕೋಟಿ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ. ಹಣ ವಾಪಸ್ ಕೇಳಿದ್ದಕ್ಕೆ ಬೆದರಿಕೆ ಹಾಕಿದದರೆ ಎಂದು ಆರೋಪಿಸಿ ಭಾಸ್ಕರ್ ಶೆಟ್ಟಿ ಎಂಬುವವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

‘ಫಿನಿಕ್ಸ್’ ಎಂಬ ಸಿನಿಮಾ ನಿರ್ಮಾಣ ಮಾಡುವುದಾಗಿ ಹೇಳಿ ಓಂ ಪ್ರಕಾಶ್ ರಾವ್ ಅವರು ಭಾಸ್ಕರ್ ಶೆಟ್ಟಿ ಅವರಿಂದ ಒಟ್ಟು 3 ಕೋಟಿ 85 ಲಕ್ಷ ರೂಪಾಯಿಗಳನ್ನು ಪಡೆದುಕೊಂಡಿದ್ದರು ಎನ್ನಲಾಗಿದೆ. ಸೆಪ್ಟೆಂಬರ್ 23ರಂದು ಈ ಹಣಕಾಸಿನ ವ್ಯವಹಾರ ನಡೆದಿದ್ದು, ಕೇವಲ ಆರು ತಿಂಗಳೊಳಗೆ ಸಂಪೂರ್ಣ ಹಣವನ್ನು ಹಿಂದಿರುಗಿಸುವುದಾಗಿ ಓಂ ಪ್ರಕಾಶ್ ಭರವಸೆ ನೀಡಿದ್ದರು. ಆದರೆ, ವ್ಯವಹಾರ ನಡೆದು ಮೂರು ವರ್ಷ ಕಳೆದರೂ ಹಣ ವಾಪಸ್ ನೀಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹಣ ವಾಪಸ್ ಕೇಳಿದಾಗಲೆಲ್ಲಾ ನಿರ್ದೇಶಕರು ವಿವಿಧ ಕಾರಣಗಳನ್ನು ನೀಡಿ ಕಾಲಹರಣ ಮಾಡುತ್ತಿದ್ದಾರೆ. ಅಲ್ಲದೆ, ಇತ್ತೀಚೆಗೆ ಅವರು ಸಂಪರ್ಕಕ್ಕೂ ಸಿಗದೆ ತಪ್ಪಿಸಿಕೊಳ್ಳುತ್ತಿದ್ದಾರೆ. ನನಗೆ ಸೇರಿದ ಹಣವನ್ನು ಕೇಳಲು ಓಂ ಪ್ರಕಾಶ್ ಅವರ ಮನೆಗೆ ತೆರಳಿದ್ದಾಗ, ಅಲ್ಲಿ ಬೆದರಿಕೆ ಹಾಕಿದ್ದಾರೆ. ದೂರುದಾರರ ಮೇಲೆಯೇ ಗಲಾಟೆ ಮಾಡಿದ ಆರೋಪ ಹೊರಿಸಿ ಅವರನ್ನು ಭಯಭೀತರನ್ನಾಗಿಸುವ ಪ್ರಯತ್ನ ನಡೆದಿದೆ ಎಂದು ಭಾಸ್ಕರ್ ಶೆಟ್ಟಿ ಆರೋಪಿಸಿದ್ದು, ದೂರು ನಿಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button