Film & Entertainment

*ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದ ಹಾಗೂ ಕಿರುತೆರೆ ಲೋಕದ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Home add -Advt

ಬೆಂಗಳೂರಿನ ನಾಗರಬಾವಿಯಲ್ಲಿರುವ ತಮ್ಮ ಮನೆಯಲ್ಲಿಯೇ ವಿನೋದ್ ದೊಂದಾಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಅವರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ವಿನೋದ್ ದೊಂಡಾಲೆ ಶಾಂತಂ ಪಾಪಂ, ಕರಿಮಣಿ ಸೇರಿದಂತೆ ಹಲವು ಧಾರಾವಾಹಿಗಳನ್ನು ನಿರ್ದೇಶಿಸಿದ್ದರು. ಪಿ.ಶೇಷಾದ್ರಿ, ಟಿ.ಎನ್.ಸೀತಾರಾಂ ಅವರ ಜೊತೆ ಸಿನಿಮಾ ಹಾಗೂ ಧಾರಾವಾಹಿಗಳ ಸಂಚಿಕೆ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಅಲ್ಲದೇ ಸದ್ಯ ನಿನಾಸಂ ಸತೀಶ್ ಅಭಿನಯದ ಅಶೋಕ್ ಬ್ಲೇಡ್ ಸಿನಿಮಾ ನಿರ್ದೇಶನ ಮಾಡುತ್ತಿದ್ದರು.

ಈ ಸಿನಿಮಾ ಚಿತ್ರೀಕರಣ ಕಳೆದ ಎರಡು ವರ್ಷಗಳಿಂದ ಕುಂಟುತ್ತಾ ಸಾಗಿತ್ತು. ಕೊನೇ ಹಂತದ ಚಿತ್ರೀಕರಣ ಬಾಕಿ ಇತ್ತು. ನಿನ್ನೆ ಸಂಜೆ ಕೂಡ ಚಿತ್ರ ತಂಡಗಳ ಜೊತೆ ಚರ್ಚೆ ನಡೆಸಿದ್ದರಿ. ಮುಂದಿನ ವಾರ ಮತ್ತೆ ಚಿತ್ರೀಕರಣ ಶುರುವಾಗುವುದರಲ್ಲಿತ್ತು. ಅಷ್ಟರಲ್ಲಿ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.


Related Articles

Back to top button