Kannada NewsKarnataka NewsLatest

ಸಾಲ ವಿತರಣೆಯಲ್ಲಿ ತಾರತಮ್ಯ: ಸದಸ್ಯರಿಂದ ಪ್ರತಿಭಟನೆ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬಡಾಲ ಅಂಕಲಗಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಾಲ ವಿತರಣೆಯಲ್ಲಿ ಭಾರೀ ತಾರತಮ್ಯ ನೀತಿ ಅನುಸರಿಸುತ್ತಿದ್ದು, ಸರಿಪಡಿಸದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಸಂಘದ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.
ಸಂಘದ ಕಾರ್ಯದರ್ಶಿಗೆ ಬುಧವಾರ ಮನವಿ ಸಲ್ಲಿಸಿರುವ ರೈತರು, ಸಹಕಾರಿ ಸಂಘದಲ್ಲಿರುವ ಸದಸ್ಯರಿಗೆ ಸಾಲ ವಿತರಣೆಯಲ್ಲಿ ತುಂಬಾ ಅನ್ಯಾಯ ಆಗುತ್ತಿದೆ. ಕೆಲವು ಸದಸ್ಯರಿಗೆ ಉದ್ದೇಶ ಪೂರ್ವಕವಾಗಿ ಅನ್ಯಾಯ ಮಾಡಲಾಗುತ್ತಿದೆ.  15 ದಿನಗಳ ಒಳಗೆ ಸರಿಪಡಿಸದಿದ್ದರೆ ಉಗ್ರ ಹೋರಾಟ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.
ಈಗಾಗಲೆ ಈ ಸಂಬಂಧ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ತಮಗೆ ಬೇಕಾದವರಿಗೆ ಹೆಚ್ಚಿನ ಸಾಲ ನೀಡಿ, ಇತರರಿಗೆ ಕಡಿಮೆ ಸಾಲ ಇಲ್ಲವೇ ಸಾಲ ನಿರಾಕರಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ ರೈತರು ಪ್ರತಿಭಟನೆ ನಡೆಸಲು ಮುಂದಾದರು. ಆದರೆ ಕೊರೋನಾ ಹಿನ್ನೆಲೆಯಲ್ಲಿ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಪೊಲೀಸರು ತಿಳಿಸಿದರು. ಹಾಗಾಗಿ ಪ್ರತಿಭಟನೆಯ ಎಚ್ಚರಿಕೆ ನೀಡಿ ಮನವಿ ಸಲ್ಲಿಸಲಾಯಿತು.
  ಶಿದ್ದಪ್ಪ  ಚಾಪಗಾವಿ, ರಾಮಗೌಡ ಪಾಟೀಲ್, ಅರ್ಜುನ್ ಅರ್ಜುನವಾಡಿ, ರಾಮಪ್ಪ ಶೀಗೆಳ್ಳಿ ಮೊದಲಾದವರು ನೇತೃತ್ವ ವಹಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button