ಸೇವಾ ಸಂಸ್ಥೆಗಳೊಂದಿಗೆ ಕೇಂದ್ರ ಸರ್ಕಾರದ ಯೋಜನೆಗಳ ಚರ್ಚೆ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಾನಗರ ಮಹಿಳಾ ಮೋರ್ಚಾ ವತಿಯಿಂದ ಬಾಂದೂರಗಲ್ಲಿ ಮರಗಾಯಿ ಮಂದಿರದಲ್ಲಿ ಮಂಗಳವಾರ ಸುಮಾರು 35 ಸ್ವಯಂ ಸೇವಾ ಸಂಸ್ಥೆಗಳೊಂದಿಗೆ ಕೇಂದ್ರ ಸರ್ಕಾರದ ಯೋಜನೆಗಳಿಂದ ಜನಸಾಮಾನ್ಯರಿಗೆ ಆಗಿರುವ ಸವಲತ್ತುಗಳ ಕುರಿತು ಚರ್ಚಿಸಲಾಯಿತು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಅನಿತಾ ಅತ್ತಿತಕರ್ ಮಾತನಾಡಿ ನರೇಂದ್ರ ಮೋದಿ ಅವರ ಸರ್ಕಾರದಿಂದ ಆಗಿರುವ ಸಾಧನೆಗಳನ್ನು ವಿವರಿಸುತ್ತ, ಆತ್ಮ ನಿರ್ಭರ ಭಾರತವನ್ನು ಕಟ್ಟುವಲ್ಲಿ ನಾವು ಭಾರತೀಯರು ಎಂದು ಯೋಚಿಸುವ ಗುಣ ಬೆಳೆಸಿಕೊಳ್ಳಬೇಕು. ಇನ್ನೂ ಹೆಚ್ಚು ನಮ್ಮ ದೇಶವನ್ನು ಅಗ್ರಸ್ಥಾನಕ್ಕೆ ತರುವಲ್ಲಿ ಮತ್ತೊಮ್ಮೆ ಮೋದಿಯವರನ್ನು ಆರಿಸಿ ತರಲು, ಫಲಾನುಭವಿಗಳಿಗೆ ವಿಷಯ ಮುಟ್ಟಿಸುವಲ್ಲಿ ಸ್ವಯಂಸೇವಕ ಕಾರ್ಯಕರ್ತರು ಪ್ರಮುಖ ಪಾತ್ರ ವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಬೆಳಗಾವಿ ಮಹಾನಗರ ಬಿಜೆಪಿ ಅಧ್ಯಕ್ಷರಾದ ಗೀತಾ ಸುತಾರ್, ಮಹಾನಗರ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸುವರ್ಣ ಪಾಟೀಲ್, ಸ್ವಯಂ ಸೇವಾ ಸಂಸ್ಥೆಯ ಮುಖ್ಯಸ್ಥರಾದ ಪ್ರಿಯಾ ಪುರಾಣಿಕ್, ಪ್ರಮೋದ ಹಜಾರೆ, ಹಾಗೂ ದಾನಮ್ಮ ಅಂಗಡಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಕಾರ್ಯಕ್ರಮದ ಉಸ್ತುವಾರಿಯನ್ನು ಮಹಿಳಾ ಮೋರ್ಚಾ ಕಾರ್ಯದರ್ಶಿ ಜ್ಯೋತಿ ಶೆಟ್ಟಿ ನಿರ್ವಹಿಸಿದರು.
35 ಸ್ವಯಂ ಸೇವಾ ಸಂಸ್ಥೆಯವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಯಂ ಸೇವಾ ಸಂಸ್ಥೆಗಳ ಕಾರ್ಯ ವೈಖರಿಗಳನ್ನು ಮತ್ತು ಮತ್ತು ಕೇಂದ್ರ ಸರ್ಕಾರದಿಂದ ನಿರ್ವಹಿಸಿದ ಯೋಜನೆಗಳನ್ನು ಚರ್ಚಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ