Kannada NewsKarnataka NewsLatest
ಕಿಸಾನ್ ಮೋರ್ಚಾ ನಾಯಕರಿಬ್ಬರ ಚರ್ಚೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯ ಸಭಾ ಸದಸ್ಯ ಹಾಗೂ ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಈರಣ್ಣ ಕಡಾಡಿ ಇಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಕಿಸಾನ್ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷ ಶಂಕರಗೌಡ ಪಾಟೀಲರನ್ನು ಭೇಟಿ ಮಾಡಿದ್ದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ರೈತ ಸಮುದಾಯಕ್ಕೆ ತಲುಪಿಸುವುದು ಹಾಗೂ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮೋರ್ಚಾ ಸಂಘಟನೆ ಮಾಡುವ ಬಗ್ಗೆ ಇಬ್ಬರೂ ಚರ್ಚೆ ನಡೆಸಿದರು.




