Belagavi NewsBelgaum NewsKannada NewsKarnataka NewsPolitics
*ಗ್ರಾಪಂ ಹಂತದಲ್ಲಿ ಬಾಕಿ ಉಳಿದಿರುವ ಕೆಲಸಗಳಿಗೆ ಚುರುಕು ನೀಡುವ ಕುರಿತು ಚರ್ಚೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗ್ರಾಮ ಪಂಚಾಯಿತಿ ಹಂತದಲ್ಲಿ ಆಗಬೇಕಿರುವ ಕೆಲಸಗಳಿಗೆ ಚುರುಕು ನೀಡಿ ಆದಷ್ಟು ಬೇಗ ಪೂರ್ಣಗೊಳಿಸುವ ಸಂಬಂಧ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಜೊತೆ ಮಂಗಳವಾರ ಚರ್ಚೆ ನಡೆಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹಾಗೂ ಅಧ್ಯಕ್ಷರ ಹಂತದಲ್ಲಿನ ಬಾಕಿ ಉಳಿದಿರುವ ಅಭಿವೃದ್ಧಿ ಕೆಲಸಗಳ ಮಾಹಿತಿ ಪಡೆದು, ಯಾವುದೇ ಕೆಲಸ ಬಾಕಿ ಉಳಿಯದಂತೆ ನಿಗಾ ವಹಿಸಲು ಆಯಾ ಗ್ರಾಮ ಪಂಚಾಯತಿಯ ಪಿಡಿಒ ಹಾಗೂ ಅಧ್ಯಕ್ಷರಿಗೆ ಮಾರ್ಗದರ್ಶನ ಹಾಗೂ ಸೂಚನೆ ನೀಡಬೇಕಾದ ಅಗತ್ಯವಿದೆ ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದರು.
ತಕ್ಷಣ ಈ ಬಗ್ಗೆ ಗಮನ ಹರಿಸಲು ಸಂಬಂಧಿಸಿದವರಿಗೆ ಸೂಚನೆ ನೀಡುವುದಾಗಿ ರಾಹುಲ್ ಶಾಂಧೆ ತಿಳಿಸಿದರು. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಸವರಾಜ ಅಡವಿಮಠ್ ಉಪಸ್ಥಿತರಿದ್ದರು.




