Belagavi NewsBelgaum NewsKannada NewsKarnataka NewsPolitics

*ಬೆಳಗಾವಿಯಲ್ಲಿ ನಡೆಯುತ್ತಿರುವ ರೈತರ ಹೋರಾಟದ ಬಗ್ಗೆ ಚರ್ಚಿಸಲಾಗಿದೆ: ಗೃಹ ಸಚಿವ ಪರಮೇಶ್ವರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ/ಬೆಂಗಳೂರು: ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಬ್ಬಿನ ಬೆಳಗ್ಗೆ 3500 ರೂ. ನಿಗದಿ ಮಾಡುವಂತೆ ರೈತರು ಕೈಗೊಂಡಿರುವ ಹೋರಾಟದ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಪ್ರತಿಕ್ರಿಯೆ ನೀಡಿದ್ದಾರೆ.‌

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮತನಾಡಿದ ಅವರು, ಸಾಧ್ಯವಾದಷ್ಟು ಬೇಗ ಕಬ್ಬಿನ ಬೆಲೆಯನ್ನು ನಿಗದಿಪಡಿಸಿ ಸಮಸ್ಯೆಯನ್ನು ಪರಿಹರಿಸಲು ಸೂಚನೆ ನೀಡಲಾಗಿದೆ ಸಾಧ್ಯವಾದಷ್ಟು ಬೇಗ ಕಬ್ಬಿನ ಬೆಲೆಯನ್ನು ನಿಗದಿಪಡಿಸಿ ಸಮಸ್ಯೆಯನ್ನು ಪರಿಹರಿಸಲು ಸೂಚನೆ ನೀಡಲಾಗಿದ್ದು, ಆದಷ್ಟು ಬೇಗ ಕಬ್ಬಿಗೆ ಬೆಲೆ ನಿಗದಿ ಮಾಡಿ ಸಮಸ್ಯೆ ಬಗೆಹರಿಸುವಂತೆ ತಿಳಿಸಲಾಗಿದೆ. 

ಇಲ್ಲದಿದ್ರೆ ಪೊಲೀಸರಿಗೆ ಪರಿಸ್ಥಿತಿ ನಿಭಾಯಿಸುವುದು ಕಷ್ಟ ಆಗುತ್ತದೆ.‌ ಸತೀಶ್ ಜಾರಕಿಹೊಳಿ ಸೇರಿ ಆ ಭಾಗದ ಸಚಿವರು ಸಮಸ್ಯೆ ಬಗೆಹರಿಸುವ ಭರವಸೆ ಕೊಟ್ಟಿದ್ದಾರೆ. ನಿನ್ನೆ ಒಬ್ಬರು ರೈತರು ಆತ್ಮಹತ್ಯೆ ಪ್ರಯತ್ನ ಮಾಡಿದ್ದರು. ಪೊಲೀಸರು ಅವರನ್ನು ರಕ್ಷಣೆ ಮಾಡಿದ್ದಾರೆ. ಈ ರೀತಿಯ ಘಟನೆಗಳು ಮರುಕಳಿಸಬಾರದು ಎಂದರು.

ಬಿಜೆಪಿಯವರು ಸಹಜವಾಗಿ ಇಂತಹ ಸಂದರ್ಭದಲ್ಲಿ ಬೆಂಬಲ ಕೊಟ್ಟಿದ್ದಾರೆ. ಇಂತಹ ಅವಕಾಶ ಮತ್ತೆ ಸಿಕ್ಕರೆ ಬಿಡುತ್ತಾರಾ? ಸರ್ಕಾರ ಕುರ್ಚಿ ಕಚ್ಚಾಟದಲ್ಲಿ ತೊಡಗಿದೆ ಎಂದು ಬಿಜೆಪಿಯವರು ಆರೋಪಿಸುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಏನಾಗಿತ್ತು ಎಂದು ಅವರೇ ನೋಡಿಕೊಳ್ಳಲಿ ಎಂದು ಟಾಂಗ್ ನೀಡಿದರು.

Home add -Advt

Related Articles

Back to top button