ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬಹಳ ಕಾಲದಿಂದ ನನೆಗುದಿಗೆ ಬಿದ್ದಿರುವ ಬೆಳಗಾವಿ ಜಿಲ್ಲಾ ವಿಭಜನೆ ಸಂಬಂಧ ಶುಕ್ರವಾರ ಮಹತ್ವದ ಬೆಳವಣಿಗೆಯಾಗಿದೆ.
ಮೊದಲ ಬಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೊಸರೀತಿಯ ಹೇಳಿಕೆ ನೀಡಿದ್ದಾರೆ. ಈವರೆಗೂ ಗೋಕಾಕ ಜಿಲ್ಲೆ ಆಗಲೇಬೇಕು ಎನ್ನುತ್ತಿದ್ದ ರಮೇಶ ಜಾರಕಿಹೊಳಿ ಇದೀಗ, ಒಬ್ಬರು ಹಿಂದೆ ಸರಿಯಬೇಕು ಎಂದಿದ್ದಾರೆ. ಇದು ಜಿಲ್ಲಾ ವಿಭಾಜನೆ ಸಂಬಂಧ ಪ್ರಮುಖ ಬೆಳವಣಿಗೆಯಾಗಿದೆ.
ಯಾರಾದರೂ ಒಬ್ಬರು ಹಿಂದೆ ಸರಿದರೆ ಚಿಕ್ಕೋಡಿ ಅಥವಾ ಗೋಕಾಕ ಜಿಲ್ಲೆ ಮಾಡಲು ಸಿದ್ಧ ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುವುದು ಅತ್ಯಂತ ಅವಶ್ಯಕವಾಗಿದ್ದು, ಚಿಕ್ಕೋಡಿ ಅಥವಾ ಗೋಕಾಕ ತಾಲೂಕಿನವರು ಯಾರಾದರೂ ಒಬ್ಬರು ಹಿಂದಕ್ಕೆ ಸರಿದರೆ ಚಿಕ್ಕೋಡಿ ಅಥವಾ ಗೋಕಾಕ ಜಿಲ್ಲೆಯನ್ನು ಮಾಡಬಹುದು ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.
ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮೀತಿಯವರಿಂದ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯ ಮನವಿ ಸ್ವೀಕರಿಸಿ ಸಚಿವ ರಮೇಶ್ ಜಾರಕಿಹೊಳಿ ಮಾತನಾಡಿ, ಕಳೆದ ಹಲವು ದಿನಗಳಿಂದ ಬೆಳಗಾವಿ ಜಿಲ್ಲೆಯನ್ನು ವಿಭಜನೆಯನ್ನು ಮಾಡಿ ಚಿಕ್ಕೋಡಿ ಗೋಕಾಕ ಜಿಲ್ಲೆಯನ್ನಾಗಿ ಮಾಡಬೇಕು ಎನ್ನುವ ಕೂಗು ಕೇಳಿ ಬರುತ್ತಿದೆ. ಕಳೆದ ಕಾಂಗ್ರೆಸ್ ಸರ್ಕಾರದಲ್ಲಿ ಚಿಕ್ಕೋಡಿ, ಗೋಕಾಕ ಜಿಲ್ಲೆಯನ್ನಾಗಿ ಮಾಡಲು ನಿರ್ಧರಿಸಿದರು. ತಾಂತ್ರಿಕ ಕಾರಣದಿಂದ ಕೈಬಿಡಲಾಯಿತು. ಚಿಕ್ಕೋಡಿ, ಗೋಕಾಕ ಪ್ರತ್ಯೆಕ ಜಿಲ್ಲೆಗೆ ಸಿ ಎಂ ಬಿ ಎಸ್ ಯಡಿಯೂರಪ್ಪನವರ ಬಳಿ ಮನವಿ ಮಾಡುವೆ. ಹಾಗೂ ಯಾರಾದರೂ ಒಬ್ಬರು ಹಿಂದೆ ಸರಿದರೆ ಚಿಕ್ಕೋಡಿ ಅಥವಾ ಗೋಕಾಕನ್ನು ಸಲೀಸಾಗಿ ಜಿಲ್ಲೆ ಮಾಡಬಹುದು ಎಂದು ಸಚಿವ ರಮೇಶ್ ಜಾರಕಿಹೋಳಿ ಸ್ಪಷ್ಟ ಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಬಿ ಆರ್ ಸಂಗಪ್ಪಗೋಳ, ಚಿಕ್ಕೋಡಿಯ ಸಂಪಾದನಾ ಸ್ವಾಮೀಜಿ, ಚಿಂಚಣಿಯ ಅಲ್ಲಮಪ್ರಭು ಸ್ವಾಮೀಜಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಮಧ್ಯಾಹ್ನ ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಬೆಳಗಾವಿ ಜಿಲ್ಲಾ ವಿಭಜನೆ ಕುರಿತು ಪ್ರಶ್ನಿಸುತ್ತಿದ್ದಂತೆ ಕೈ ಮುಗಿದು ಜಾಗಖಾಲಿ ಮಾಡಿದರು. ಪ್ರಶ್ನೆ ಮುಂಗಿಯುವ ಮುನ್ನವೇ ಅವರು ಪತ್ರಕರ್ತರಿಗೆ ಕೈ ಮುಗಿದು ಹೊರಟೇಬಿಟ್ಟರು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಸಚಿವೆ ಶಶಿಕಲಾ ಜೊಲ್ಲೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಸೇರಿದಂತೆ ಅನೇಕ ಗಣ್ಯರು ಅಲ್ಲೇ ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ