ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ: ಕೊಲ್ಲಾಪುರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ. ಕೊಲ್ಲಾಪುರ ಘರ್ಷಣೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ಈ ಮಧ್ಯೆ,
ವಿವಾದಿತ ಸ್ಟೇಟಸ್ ಹಿನ್ನೆಲೆಯಲ್ಲಿ ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಗರಾದ್ಯಂತ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಪಾಟೀಲ ಬೆಂಗಳೂರು ಪ್ರವಾಸ ರದ್ದುಪಡಿಸಿ ನಿಪ್ಪಾಣಿಗೆ ಧಾವಿಸಿದ್ದು, ಪೊಲೀಸ್ ಪಥಸಂಚಲನ ನಡೆಸಿದ್ದಾರೆ. ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದು ಎಲ್ಲೆಡೆ ಕಟ್ಟೆಚ್ಚರವಹಿಸುವಂತೆ ತಿಳಿಸಿದ್ದಾರೆ.
ತಾಲೂಕಿನ ಕೊಗನೋಳಿ, ಬೋರಗಾಂವ್, ಅಕ್ಕೋಳ, ಯಕ್ಸಂಬಾ, ಬೇಡಕಿಹಾಳ, ಮಣಕಾಪುರ, ಸಿದ್ನಾಳ, ಮಾಂಗೂರು, ಚಂಡೂರು ಪ್ರದೇಶಗಳಿಗೆ ಸಹ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಸೌಹಾರ್ದತೆ ಕೆಡಿಸುವಂತಹ ಪೊಸ್ಟ್ ಹಾಕಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಸಂಜೀವ್ ಪಾಟೀಲ ಎಚ್ಚರಿಕೆಯ ಮನವಿ ಮಾಡಿದ್ದಾರೆ.
ಎರಡೂ ರಾಜ್ಯಗಳ ಮಧ್ಯೆ ವಾಹನ ಸಂಚಾರ ಎಂದಿನಂತೆಯೇ ಮುಂದುವರಿದಿದೆ. ನಗರದಲ್ಲಿ ಎಲ್ಲ ವ್ಯವಹಾರಗಳೂ ಸಹಜವಾಗಿವೆ ಎಂದು ಎಸ್ಪಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಯುವಕರು ಸಂದೇಶಗಳನ್ನು ಹರಿಬಿಡುತ್ತಿರುವ ಮತ್ತು ಫಾರ್ವರ್ಡ್ ಮಾಡುತ್ತಿರುವುದು ಕಂಡು ಬಂದಿದೆ. ಮುಂದುವರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಎಲ್ಲ ಠಾಣೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ನಾಲ್ವರು IPS ಅಧಿಕಾರಿಗಳ ವರ್ಗಾವಣೆ
https://pragati.taskdun.com/transfer-of-four-ips-officers/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ