Belagavi NewsBelgaum NewsKannada NewsKarnataka News

*ಗಣೇಶ ಮೂರ್ತಿಗಳ ವಿಸರ್ಜನೆ ದಿನ: ಮದ್ಯ ಮಾರಾಟ ನಿಷೇಧ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶ್ರೀ ಗಣೇಶ ಮೂರ್ತಿಗಳ ವಿಸರ್ಜನೆ ಪ್ರಯುಕ್ತ ಸೆ.16 ರಂದು ಸಂಜೆ 6 ಗಂಟೆಯಿಂದ ಸೆ.18 ರ 6 ಗಂಟೆವರೆಗೆ ಬೆಳಗಾವಿ ತಾಲೂಕಿನಾದ್ಯಂತ ಮಧ್ಯದ ಅಂಗಡಿ, ವೈನಶಾಪ್, ಬಾರ್‌ಗಳು, ಕ್ಲಬ್‌ಗಳಲ್ಲಿ ಮತ್ತು ಹೊಟೇಲ್‌ಗಳಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸಾಗಣಿಕೆಯನ್ನು ನಿಷೇಧಿಸಿ, ಮದ್ಯದ ಅಂಗಡಿಗಳನ್ನು ಹಾಗೂ ಕೆಎಸ್‌ಬಿಸಿಎಲ್ ಡಿಮೋಗಳನ್ನು, ಹೊಟೇಲ್‌ಗಳಲ್ಲಿರುವ ಬಾರ್‌ಗಳನ್ನು ಮುಚ್ಚಲು ಪೊಲೀಸ್ ಆಯುಕ್ತರಾದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅದೇಶವನ್ನು ಹೊರಡಿಸಿದ್ದಾರೆ.

ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ಅಬಕಾರಿ ಇನ್ಸ್‌ಪೆಕ್ಟರ್ ಹಾಗೂ ಉಪವಿಭಾಗ ಅಬಕಾರಿ ಅಧೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(2) ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ 1963 ಕಲಂ 31ರ ಪ್ರಕಾರ ಅವಶ್ಯಕತೆ ಕಂಡುಬಂದಲ್ಲಿ ಶಾಂತಿ ಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆದೇಶ ಹೊರಡಿಸಿದ್ದಾರೆ. ಸದರಿ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button