Latest

ದೆಹಲಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಕರ್ನಾಟಕದ ಯೋಧ

ಪ್ರಗತಿವಾಹಿನಿ ಸುದ್ದಿ: ನವದೆಹಲಿ; ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್‌ನ (ಐಟಿಬಿಪಿ) ಕರ್ನಾಟಕ ಮೂಲದ ಯೋಧನೊಬ್ಬ ಡೆತ್ ನೋಟ್ ಬರೆದಿಟ್ಟು ತನ್ನದೇ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದೆಹಲಿಯಲ್ಲಿ ನಡೆದಿದೆ.

ತೀನ್‌ಮೂರ್ತಿ ಭವನದ ಭದ್ರತೆಗೆ ನಿಯೋಜಿಸಲಾಗಿದ್ದ ವೈ. ರೆಡ್ಡಿ (31) ಆತ್ಮಹತ್ಯೆ ಮಾಡಿಕೊಂಡವರು. ಸೋಮವಾರ ಬೆಳಗಿನ ಜಾವ ೫ ಗಂಟೆ ಸುಮಾರಿಗೆ ರಕ್ಷಣಾ ಇಲಾಖೆಯಿಂದ ನೀಡಿರುವ ಇನ್ಸಾಸ್ ರೈಫಲ್‌ನಿಂದ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತ್ನಿ ಮಾವನ ಕಿರುಕುಳ ?

ವೈ ರೆಡ್ಡಿ, ಕಳೆದ ವರ್ಷ ಅಕ್ಟೋಬರ್‌ನಲ್ಲಿ ವಿವಾಹವಾಗಿದ್ದರು. ೩೦ ದಿನಗಳ ರಜೆ ಮೇಲೆ ಊರಿಗೆ ಬಂದಿದ್ದ ಅವರು ಕಳೆದ ವಾರವಷ್ಟೇ ದೆಹಲಿಗೆ ವಾಪಸಾಗಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮೊದಲು ರೆಡಿ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಮಾವ ಮತ್ತು ಪತ್ನಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಶಿವಮೊಗ್ಗ ಧಗ ಧಗ : ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿ; ಮನೆ-ಅಂಗಡಿಗಳ ಮೇಲೂ ಕಲ್ಲು ತೂರಾಟ; ರಸ್ತೆ ರಸ್ತೆಯಲ್ಲಿ ತಲ್ವಾರ್, ದೊಣ್ಣೆ ಹಿಡಿದು ನಿಂತ ಉದ್ರಿಕ್ತರು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button