GIT add 2024-1
Laxmi Tai add
Beereshwara 33

ಬೆಂಬಲ ಬೆಲೆ ಕಾಯ್ದೆ ಜಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

Anvekar 3
Cancer Hospital 2

ಕೃಷಿಕರಿಗೆ ಕೃಷಿ ಸಲಕರಣೆಗಳ ವಿತರಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “ದೇಶದ ಆಹಾರ ಸ್ವಾವಲಂಬನೆಗೆ ಶ್ರಮಿಸುತ್ತಿರುವ ರೈತರಿಗೆ ಬೆಂಬಲ ಬೆಲೆ‌ ಕೊಡುವುದು ಸರಕಾರದ ಕರ್ತವ್ಯವಾಗಿದೆ. ದೇಶದಾದ್ಯಂತ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ.) ಕಾಯ್ದೆ ಜಾರಿಗೆ ರೈತರು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಎಂ.ಎಸ್.ಪಿ. ಕಾಯ್ದೆ ಜಾರಿಗೆ ತರಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕೃಷಿ ಇಲಾಖೆಯ ಆಶ್ರಯದಲ್ಲಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗುರುವಾರ(ಮಾ‌. 6) ನಡೆದ ಕಾರ್ಯಕ್ರಮದಲ್ಲಿ ಬೆಳಗಾವಿ ವಿಭಾಗದ ಫಲಾನುಭವಿ ರೈತರಿಗೆ ವಿವಿಧ ಕೃಷಿ ಸಲಕರಣೆಗಳು ಮತ್ತು ಸೌಲಭ್ಯಗಳನ್ನು ವಿತರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಇದರಲ್ಲಿ 196 ತಾಲ್ಲೂಕುಗಳು ತೀವ್ರ ಬರಪೀಡಿತವಾಗಿವೆ.

ಒಟ್ಟಾರೆ 18,171 ಕೋಟಿ ಬೆಳೆಹಾನಿಯಾಗಿದ್ದು, ಪರಿಹಾರ ಒದಗಿಸುವಂತೆ ಕೋರಿ ಕೇಂದ್ರ ಸರಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ನೆರವು ನೀಡಿಲ್ಲ ಎಂದು ಹೇಳಿದರು.

ರೈತರಿಗೆ ತಲಾ 2 ಸಾವಿರದಂತೆ ರಾಜ್ಯ ಸರಕಾರ ತಾತ್ಕಾಲಿಕವಾಗಿ 631 ಕೋಟಿ ರೂಪಾಯಿ ನೆರವು ನೀಡಿದೆ. 

ಹಿಂದಿನ ಸರಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಕೃಷಿಹೊಂಡ ಯೋಜನೆಯನ್ನು ಕೂಡ ಇದಕ್ಕೂ ಮುಂಚಿನ ಸರಕಾರ ಸ್ಥಗಿತಗೊಳಿಸಿತ್ತು. ಈ ಬಾರಿ 200 ಕೋಟಿ ರೂಪಾಯಿ ಒದಗಿಸುವ ಮೂಲಕ ಕೃಷಿಭಾಗ್ಯ ಯೋಜನೆಗೆ ಮರುಚಾಲನೆ ನೀಡಲಾಗಿದೆ.

900 ಕೋಟಿ ಮೊತ್ತದ ಕೃಷಿ ಸಲಕರಣೆ ವಿತರಣೆ:

ಬೆಳಗಾವಿ ವಿಭಾಗಮಟ್ಟದಲ್ಲಿ 2700 ರೈತರಿಗೆ 13.12 ಕೋಟಿ ರೂಪಾಯಿ ಮೊತ್ತದ ವಿವಿಧ ಬಗೆಯ ಕೃಷಿ ಸಲಕರಣೆಗಳನ್ನು ನೀಡಲಾಗುತ್ತಿದೆ. ಇದೇ ರೀತಿ ರಾಜ್ಯದಾದ್ಯಂತ ಒಟ್ಟಾರರ 900 ಕೋಟಿಗಿಂತ ಅಧಿಕ ಮೊತ್ತದ ಸಲಕರಣೆಗಳನ್ನು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಆಧುನಿಕ ಯಂತ್ರೋಪಕರಣಗಳ ಮೂಲಕ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಸಹಾಯಧನದ ಮೂಲಕ ಸಲಕರಣೆಗಳನ್ನು ನೀಡಲಾಗುತ್ತಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ರೈತರಿಗೆ ಆಧುನಿಕ ಬೇಸಾಯ ಪದ್ಧತಿ ಅಳವಡಿಸಿಕೊಳ್ಳಲು ಅನುಕೂಲವಾಗಲಿದೆ ಎಂದರು.

ಸೂಕ್ಷ್ಮ ನೀರಾವರಿ ಅಳವಡಿಸಿಕೊಂಡಿರುವ ರೈತರಿಗೂ ಸಬ್ಸಿಡಿ ಆಧಾರಿತ ಯಂತ್ರೋಪಕರಣ ನೀಡಲಾಗುತ್ತಿದೆ. ಸಮಗ್ರ ಕೃಷಿ ಪದ್ಧತಿ ಅಭಿವೃದ್ಧಿಗೆ ಸರಕಾರ ಪ್ರೋತ್ಸಾಹ ನೀಡುತ್ತಿದೆ.

ನೀರಾವರಿ, ಕೃಷಿ ಪದ್ಧತಿ, ಬೆಳೆಗೆ ನ್ಯಾಯಯುತ ಬೆಲೆ ಒದಗಿಸುವುದು ಸೇರಿದಂತೆ ರೈತರ ಹಿತರಕ್ಷಣೆಗೆ ಸರಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಮಾತನಾಡಿ, “ಸೈನಿಕ, ಕಾರ್ಮಿಕ, ಶಿಕ್ಷಕ ಹಾಗೂ ರೈತರು ಸಮಾಜದ ಆಧಾರಸ್ತಂಭ. ರೈತರ ಬದುಕು ಹಸನಾಗಿಸಲು ಕೃಷಿ ಇಲಾಖೆಯ ವತಿಯಿಂದ ಹತ್ತಾರು ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಕಬ್ಬು ಕಟಾವು ಯಙತ್ರ, ಟ್ರ್ಯಾಕ್ಟರ್ ಸೇರಿದಂತೆ ಕೋಟ್ಯಂತರ ಮೊತ್ತದ ಸಲಕರಣೆಗಳನ್ನು ನೀಡಲಾಗುತ್ತಿದೆ” ಎಂದು ಹೇಳಿದರು.

ಸುವರ್ಣ ಸೌಧ ಆವರಣದಲ್ಲಿ ರೈತರಿಗೆ ಕೃಷಿ ಸಲಕರಣೆಗಳನ್ನು ನೀಡುತ್ತಿರುವುದು ಸೌಭಾಗ್ಯ.

ಎಪಿಎಂಸಿ ಕಾಯ್ದೆ ವಾಪಸ್ ಪಡೆಯುವುದಾಗಿ ಚುನಾವಣೆ ವೇಳೆ ಭರವಸೆ ನೀಡಿದಂತೆ ಪರಿಷ್ಕೃತ ಕಾಯ್ದೆಗೆ ಅನುಮೋದನೆ ಪಡೆಯಲಾಗಿದೆ.

Emergency Service

ರೈತರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸವನ್ನು ಸರಕಾರ ಮಾಡುತ್ತಿದೆ. ಉತ್ತರ ಕರ್ನಾಟಕ‌ ಭಾಗದಲ್ಲೂ ರೇಷ್ಮೆ ಹೆಚ್ಚಾಗಿ ಬೆಳೆಯುತ್ತಿರುವುದು ಒಳ್ಳೆಯ ಬೆಳವಣಿಗೆ. ಬೆಳಗಾವಿಯಲ್ಲಿ ಕಬ್ಬು, ಹಣ್ಣು, ತರಕಾರಿ ಬೆಳೆ ಸೇರಿದಂತೆ ಹೈನುಗಾರಿಕೆ ಹೆಚ್ಚಾಗುತ್ತಿರುವುದು ರೈತರಿಗೆ ಅನುಕೂಲವಾಗುತ್ತಿದೆ.

ಐದು ಗ್ಯಾರಂಟಿ ಬಲಪಡಿಸಲು ಕೈಗೆ ಶಕ್ತಿ ತುಂಬಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜನರಿಗೆ ಮನವಿ ಮಾಡಿಕೊಂಡರು.

ಕುಡಿಯುವ ನೀರಿನ ಯೋಜನೆಯಾಗಿರುವ ಕಳಸಾ-ಬಂಡೂರಿ ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸರಕಾರ ಬದ್ಧವಿದೆ. ಜನರ ಸಹಕಾರ ಇದ್ದರೆ ಇದು ಸಾಧ್ಯವಾಗಲಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕೃಷಿ ಇಲಾಖೆಯ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು, ರೈತರು ಸಂಕಷ್ಟದಲ್ಲಿರುವುದರಿಂದ ಯಾವುದೇ ಸಂದರ್ಭದಲ್ಲಿಯೂ ಅವರಿಗೆ ತೊಂದರೆಯಾಗದಂತೆ ಹೆಚ್ಚು ಹೆಚ್ಚು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.

ರಾಜ್ಯದಲ್ಲಿ ಇದುವರೆಗೆ 2.5 ಲಕ್ಷ ರೈತರಿಗೆ ತುಂತು ನೀರಾವರಿ ಘಟಕ ನೀಡಲಾಗಿದ್ದು, ಇನ್ನೊಂದು ತಿಂಗಳಿನಲ್ಲಿ 1 ಲಕ್ಷ ಘಟಕಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ಬೆಳಗಾವಿ ವಿಭಾಗದ ಮಟ್ಟದ ಕಾರ್ಯಕ್ರಮದಲ್ಲಿ 2763 ರೈತರಿಗೆ 13 ಕೋಟಿ ಮೊತ್ತದ ಕೃಷಿ ಸಲಕರಣೆಗಳನ್ನು ನೀಡಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಬರಗಾಲದಿಂದ ತತ್ತರಿಸಿರುವುದರಿಂದ ಕೇಂದ್ರ ಸರಕಾರದ ನೆರವು ಕೋರಿ ಹತ್ತಾರು ಪತ್ರ ಬರೆದರೂ ಯಾವುದೇ ರೀತಿಯ ನೆರವು ಲಭಿಸಿಲ್ಲ ಎಂದು ಚಲುವರಾಯಸ್ವಾಮಿ ತಿಳಿಸಿದರು.

ಸರಕಾರ ಬರೀ ಗ್ಯಾರಂಟಿ ಯೋಜನೆಗಳಿಗೆ ಸೀಮಿತಗೊಳ್ಳದೇ ರೈತರು ಸೇರಿದಂತೆ ಎಲ್ಲ ವರ್ಗದ ಜನರ ನೆರವು ನೀಡುತ್ತಿದೆ. ಎಂತಹದ್ದೇ ಕಷ್ಟ ಎದುರಾದರೂ ಸರಕಾರ ರೈತರ ಜತೆಗಿರುತ್ತದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಚುವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಆಸಿಫ್(ರಾಜು) ಸೇಠ್, ಸವದತ್ತಿ ಶಾಸಕ‌ ವಿಶ್ವಾಸ್ ವೈದ್ಯ, ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ, ಬೈಲಹೊಂಗಲ ಶಾಸಕ‌ ಮಹಾಂತೇಶ ಕೌಜಲಗಿ, ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ, ಕೃಷಿ ಇಲಾಖೆಯ ಕಾರ್ಯದರ್ಶಿ ಅನ್ಬುಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಕೃಷಿ ಆಯುಕ್ತರಾದ ವೈ.ಎಸ್.ಪಾಟೀಲ ಅವರು ಸ್ವಾಗತಿಸಿದರು.

ಕೂರಿಗೆ, ನೇಗಿಲು ಮತ್ತಿತರ ಸಲಕರಣೆ ವಿತರಣೆ:

ಮುಖ್ಯಮಂತ್ರಿಗಳು ವಿಭಾಗದ ವ್ಯಾಪ್ತಿಯ ಏಳು ಜಿಲ್ಲೆಯ 2700 ರೈತರಿಗೆ 13.12 ಕೋಟಿ ರೂಪಾಯಿ ಮೊತ್ತದ ವಿವಿಧ ಬಗೆಯ ಕೃಷಿ ಸಲಕರಣೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿತರಿಸಿದರು.

ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಸಾಲು ಸಾಲಾಗಿ ಜೋಡಿಸಿ ಇಡಲಾಗಿದ್ದ ಕೂರಿಗೆ, ನೇಗಿಲು, ಟ್ರ್ಯಾಕ್ಟರ್, ಶುಗರ್ ಕೇನ್ ಹಾರ್ವೆಸ್ಟರ್, ಮೇವು ಕಟಾವು ಯಂತ್ರ, ಪವರ್ ಟಿಲ್ಲರ್, ರೋಟೋವೇಟರ್, ಹನಿ ಮತ್ತು ತುಂತುರು ನೀರಾವರಿ ಘಟಕದ ಸಲಕರಣೆಗಳನ್ನು ರೈತ ಫಲಾನುಭವಿಗಳಿಗೆ ವಿತರಿಸಲಾಯಿತು.

ಕೃಷಿ ಇಲಾಖೆಯ ಸಚಿವರಾದ ಎನ್.ಚಲುವರಾಯಸ್ವಾಮಿ ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಕ್ಕರೆ ಕಾರ್ಖಾನೆಗೆ ಸಾಗಿಸುವ ಕಬ್ಬು ತೂಕ ಮಾಡಲು ಡಿಜಿಟಲ್ ಯಂತ್ರ ಅಳವಡಿಸಲು ಆಯವ್ಯದಲ್ಲಿ ಘೋಷಿಸಿರುವ ಹಿನ್ನೆಲೆಯಲ್ಲಿ ರೈತ ಸಂಘದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಯಿತು.

ಬೆಳಗಾವಿ ವಿಭಾಗದ ವ್ಯಾಪ್ತಿಯ ಏಳು ಜಿಲ್ಲೆಗಳ ರೈತ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Bottom Add3
Bottom Ad 2