Kannada NewsKarnataka News

*ಕಟ್ಟಡ ಕುಸಿದು ಮೃತಪಟ್ಟಿದ್ದ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ವಿತರಣೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಬಾಬುಸಾ ಪಾಳ್ಯದಲ್ಲಿ ನಡೆದ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ 8 ಕಾರ್ಮಿಕರ ಕುಟುಂಬದವರಿಗೆ ಪರಿಹಾರದ ಚೆಕ್ ವಿತರಿಸಲಾಯಿತು.

ವಿಕಾಸಸೌಧದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಾರ್ಮಿಕರ ಕುಟುಂಬಕ್ಕೆ ತಲಾ 2.04 ಲಕ್ಷ ಮೊತ್ತದ ಚೆಕ್ ವಿತರಿಸಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ವಿ. ಪ್ರಸಾದ್, ಕಾರ್ಮಿಕ ಆಯುಕ್ತ ಗೋಪಾಲಕೃಷ್ಣ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ, ಉಪ ಕಾರ್ಯದರ್ಶಿ ಸಂಗಪ್ಪ ಉಪಾಸೆ, ಜಂಟಿ ಕಾರ್ಮಿಕ ಆಯುಕ್ತ ಜಾನ್ಸನ್ ಸೇರಿದಂತೆ ಉಪಸ್ಥಿತರಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button