ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುತಗಾ ಮತ್ತು ನಿಲಜಿ ಗ್ರಾಮದಲ್ಲಿ ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಬುಧವಾರ ಸಂಜೆ ದಿನಸಿ ಹಾಗೂ ಆಹಾರ ಸಾಮಾಗ್ರಿಗಳ ಕಿಟ್ ಗಳನ್ನು ವಿತರಿಸಲಾಯಿತು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮಾರ್ಗದರ್ಶನದಲ್ಲಿ ಫೌಂಡೇಶನ್ ಪದಾಧಿಕಾರಿಗಳು ಗ್ರಾಮಗಳಿಗೆ ತೆರಳಿ ಕಿಟ್ ಗಳನ್ನು ಬಡವರಿಗೆ ಹಂಚಿದರು. ಲಾಕ್ ಡೌನ್ ನಿಂದಾಗಿ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆಯಾಗಿದೆ. ಹಾಗಾಗಿ ಅವರ ಮನೆ ಬಾಗಿಲಿಗೆ ಹೋಗಿ ಆಹಾರ ಸಾಮಗ್ರಿ ಹಾಗೂ ಕಿರಾಣಿ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ ಎಂದು ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ.
ನೀವು ಎಷ್ಟು ಸುರಕ್ಷಿತವಾಗಿ ಮನೆಯಲ್ಲಿರುತ್ತಿರೋ ಅಷ್ಟು ಬೇಗ ಕೊರೊನಾ ವೈರಸ್ ನ್ನು ಹೊಡೆದೋಡಿಸಬಹುದು. ಲಾಕ್ ಡೌನ್ ನಿಯಮಗಳನ್ನು ಯಾರು ಉಲ್ಲಂಘನೆ ಮಾಡದೆ ನಿಮ್ಮ ಮತ್ತು ಕುಟುಂಬಸ್ಥರ ಸುರಕ್ಷತೆ ಹಾಗೂ ಆರೋಗ್ಯವನ್ನು ಕಾಪಾಡುವುದರೊಂದಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ ಎಂದು ಹೆಬ್ಬಾಳಕರ್ ಜನರಲ್ಲಿ ವಿನಂತಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ