ಸಚಿವ ಸಿ.ಎನ್.ಅಶ್ವತ್ಥ ನಾರಾಯಣ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರಿಂದ ಚೆಕ್ ವಿತರಣೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ 18 ಮಹಿಳಾ ಸಂಘಗಳಿಗೆ ಬುಧವಾರ ಉನ್ನತ ಶಿಕ್ಷಣ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಸಿ.ಎನ್.ಅಶ್ವತ್ಥ ನಾರಾಯಣ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸಾಂಬ್ರಾದಲ್ಲಿ ಪ್ರೋತ್ಸಾಹ ಧನ ವಿತರಿಸಿದರು.
ಸಾಂಬ್ರಾ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಚೆಕ್ ಗಳನ್ನು ನೀಡಲಾಯಿತು. 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಗುಡಿ ಕೈಗಾರಿಕೆ ಮತ್ತು ಕೌಶಲ್ಯಾಭಿವೃದ್ಧಿ ಪ್ರೋತ್ಸಾಹಿಸಲು ಈ ವರ್ಷ ರಾಜ್ಯದ 700ಕ್ಕೂ ಹೆಚ್ಚು ಸ್ವಸಹಾಯ ಸಂಘಗಳಿಗೆ ಸರ್ಕಾರ ಪ್ರೋತ್ಸಾಹ ಧನ ನೀಡುತ್ತಿದೆ.
ಸಾಮಾನ್ಯ ವರ್ಗದವರಿಗೆ 75 ಸಾವಿರ ರೂ., ಪರಿಶಿಷ್ಠ ಜಾತಿ, ಪಂಗಡದವರಿಗೆ 1.25 ಲಕ್ಷ ರೂ. ನಿಗದಿಪಡಿಸಲಾಗಿದೆ. ಬುಧವಾರ ಬೆಳಗಾವಿ ತಾಲೂಕಿನ 18 ಸಂಘಗಳಿಗೆ ಚಿಕ್ ಗಳನ್ನು ವಿತರಿಸಲಾಯಿತು.
ಮಹಿಳೆಯರಿಗೆ ಉತ್ತೇಜನ ನೀಡುವ ಸಲುವಾಗಿ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸಾಲ ಮನ್ನಾ ಮಾಡಬೇಕು. ಮಹಿಳಾ ಸಬಲೀಕರಣಕ್ಕೆ ಕ್ರಮ ತೆಗೆದುಕೊಳ್ಳಬೇಕು. ಹೈನುಗಾರಿಕೆಗೆ ಪ್ರೋತ್ಸಾಹ ನೀಡಬೇಕು. ಮಹಿಳೆಯರಿಗೆ ಸಂಬಂಧಿಸಿದ ಎಲ್ಲ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಸಚಿವ ಡಾ. ಅಶ್ವತ್ ನಾರಾಯಣ ಅವರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಜಿಲ್ಲಾ ಪಂಚಾಯತ್ CEO ದರ್ಶನ, ತಾಲೂಕು ಪಂಚಾಯತ್ ನ AEO ರಾಜೇಶ್ ಧನವಾಡ್ಕರ್, ಮುತಗಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಸವರಾಜ ಕಡಿಮನಿ, ಬಾಳೇಕುಂದ್ರಿ ಕೆ ಎಚ್ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ ಕುಡಚಿ, ಬಾಳೇಕುಂದ್ರಿ ಬಿಕೆ ಗ್ರಾಮ ಪಂಚಾಯತ್ ಅಧಿಕಾರಿ ಸುರೇಶ ಬಾಗಲಿ, ಮಾರಿಹಾಳ ಗ್ರಾಮ ಪಂಚಾಯತ್ ಅಧಿಕಾರಿ ಹರ್ಷವರ್ಧನ, ಕರಡಿಗುದ್ದಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹನಮಂತ ಪೊಳ್, ಸಾಂಬ್ರಾ ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವ ಸದಸ್ಯರು, ನಾಗೇಶ ದೇಸಾಯಿ, ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಮುಖ್ಯಸ್ಥರು, ಸದಸ್ಯರು, ಅನೇಕ ಮಹಿಳೆಯರು, ಸಾರ್ವಜನಿಕರು, ಪಕ್ಷದ ಕಾರ್ಯಕರ್ತರು ಹಾಗೂ ಮುಂತಾದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ