
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2022-23 ನೇ ಸಾಲಿನ ಇಲಾಖೆಯ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯಡಿ ಆಯ್ಕೆಯಾದ ವಿಕಲಚೇತನ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಭಾನುವಾರ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿದರು.


ಸರಕಾರದಿಂದ ಪೂರೈಸಲಾದ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಫಲಾನುಭವಿಗಳು ಸ್ವಾಭಿಮಾನಿಗಳಾಗಿ ಜೀವನ ನಡೆಸುವಂತೆ ಲಕ್ಷ್ಮೀ ಹೆಬ್ಬಾಳಕರ ಈ ಸಂದರ್ಭದಲ್ಲಿ ಹೇಳಿದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗರಾಜು ಆರ್. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ