Belagavi NewsBelgaum NewsKannada NewsKarnataka News

*ನಾಟಿ ಕೋಳಿಗಳ ವಿತರಣೆ*; *ನ.28 ರೊಳಗೆ ಅರ್ಜಿ ಸಲ್ಲಿಸಲು ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗ್ರಾಮೀಣ ಪ್ರದೇಶದ ತಾಂಡಾಗಳಲ್ಲಿ ವಾಸಿಸುವ ಬಂಜಾರ, ಲಮಾನಿ, ಲಂಬಾನಿ, ಸುಕಾಲಿ ಹಾಗೂ ಸುಗಾಲಿ ಸಮುದಾಯದ ಅರ್ಹ ರೈತ ಮಹಿಳೆಯರಿಗೆ ಉಚಿತವಾಗಿ ನಾಟಿ ಕೋಳಿ ಮರಿಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳಿ ನಿಯಮಿತ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2026-27ನೇ ಸಾಲಿನಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.

ಯೋಜನೆಯಡಿ ಆಯ್ಕೆಯಾಗುವ ಪ್ರತಿ ಫಲಾನುಭವಿಗೆ ತಲಾ 20ರಂತೆ ಐದು ವಾರಗಳ ದೇಶಿ ನಾಟಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ.

ಬೆಳಗಾವಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ತಾಂಡಾಗಳಲ್ಲಿ ವಾಸಿಸುವ ಅರ್ಹ ರೈತ ಮಹಿಳೆಯರು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ನವೆಂಬರ್ 28ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಬೆಳಗಾವಿಯ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Related Articles

Back to top button