
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಗಳಿಗೆ ಶಾಸಕ ಗಣೇಶ ಹುಕ್ಕೇರಿ ಗುರುವಾರ ಪರಿಹಾರದ ಚೆಕ್ ಗಳನ್ನು ವಿತರಿಸಿದರು.
ಕೇರೂರ ಗ್ರಾಮದ ರೈತರಾದ ಈಶ್ವರ ಮಾಂಗನೂರೆ ಮತ್ತು ಬಾಳು ಯಾದವ(ಕೇಸ್ತಿಗೋಳ) ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಶಾಸಕ ಗಣೇಶ ಹುಕ್ಕೇರಿ ಈ ರೈತರ ಕುಟುಂಬಗಳಿಗೆ ಪರಿಹಾರ ಮಂಜೂರು ಮಾಡಲು ಸರಕಾರಕ್ಕೆ ಶಿಫಾರಸ್ಸು ಮಾಡಿದ್ದರು.
ಅದರಂತೆ ಗುರುವಾರ ಮೃತರ ಮನೆಗೆ ತೆರಳಿದ ಶಾಸಕರು ಚೆಕ್ ಹಸ್ತಾಂತರಿಸಿದರಲ್ಲದೆ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಕುಟುಂಬಕ್ಕೆ ಧೈರ್ಯ ತುಂಬಿದ ಗಣೇಶ ಹುಕ್ಕೇರಿ, ಅವರ ಸಂಕಷ್ಟದಲ್ಲಿ ತಾವೂ ಭಾಗಿಯಾಗುವುದಾಗಿ ಭರವಸೆ ನೀಡಿದರು.
ಸ್ಥಳೀಯ ನಾಗರಿಕರು, ಕಾರ್ಯಕರ್ತರು, ಅಧಿಕಾರಿಗಳು, ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ