
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಲಕ್ಷ್ಮಿ ತಾಯಿ ಫೌಂಡೇಶನ್ ವತಿಯಿಂದ ಬೆಳಗಾವಿಯ ಪೊಲೀಸರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಾಟಲ್ ಗಳನ್ನು ವಿತರಿಸಲಾಯಿತು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ಫೌಂಡೇಶನ್ ಪದಾಧಿಕಾರಿಗಳು ವಿವಿಧ ಪೊಲೀಸ್ ಠಾಣೆಗಳಿಗೆ ತೆರಳಿ ಸಾಮಗ್ರಿಗಳನ್ನು ವಿತರಿಸಿದರು.

ಕೊರೊನಾ ವೈರಸ್ ಹೋರಾಟದಲ್ಲಿ ಪೋಲಿಸ್ ಅಧಿಕಾರಿಗಳ ಕಾರ್ಯ ಶ್ಲಾಘನೀಯವಾಗಿದೆ, ಅಧಿಕಾರಿಗಳ ಸೇವೆಗಳಿಗೆ ಸಮಸ್ತ ಕ್ಷೇತ್ರದ ಜನತೆಯ ಪರವಾಗಿ ಹೃದಯ ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳಕರ್ ಈ ಸಂದರ್ಭದಲ್ಲಿ ತಿಳಿಸಿದರು.
ಪೊಲೀಸರು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ವಯಕ್ತಿಕ ಆರೋಗ್ಯದ ಕಡೆಗೂ ಗಮನಹರಿಸಬೇಕು. ನಿಮ್ಮ ಕಾರ್ಯಕ್ಕೆ ಮಾನವಕುಲ ಚಿರಋಣಿಯಾಗಿರಲಿದೆ ಎಂದು ಅವರು ಹೇಳಿದರು.
