300ಕ್ಕೂ ಹೆಚ್ಚು ಕುಟುಂಬಗಳಿಗೆ ವಿವಿಧ ಪೆನ್ಶನ್ ಆದೇಶ ಪತ್ರ ವಿತರಣೆ
January 7, 2020
Less than a minute
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಮಾರು 300ಕ್ಕೂ ಹೆಚ್ಚು ಜನರಿಗೆ ವಿವಿಧ ಪೆನ್ಶನ್ ಯೋಜನೆಯ ಪ್ರಮಾಣ ಪತ್ರಗಳನ್ನು ಮಂಗಳವಾರ ವಿತರಿಸಲಾಯಿತು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಕಂಗ್ರಾಳಿ ಬಿ ಕೆ ಗ್ರಾಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳಿಂದ ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಅವರಿಂದ ಪ್ರಮಾಣ ಪತ್ರಗಳನ್ನು ಹಸ್ತಾಂತರಿಸಲಾಯಿತು.
ವಿಧವಾ ವೇತನ, ಅಂಗವಿಕಲ ವೇತನ, ವೃದ್ಧಾಪ್ಯ ವೇತನ ಹಾಗೂ ಇನ್ನಿತರ ಹಕ್ಕು ಪತ್ರಗಳನ್ನು ವಿತರಿಸಲಾಯಿತು. ಸರಕಾರಿ ಕಚೇರಿಗಳಿಗೆ ಅಲೆದರೂ ಕೆಲಸವಾಗದ ಸಂದರ್ಭದಲ್ಲಿ ಮನೆ ಬಾಗಿಲಿಗೆ ಬಂದು ಪ್ರಮಾಣ ವಿತರಿಸುತ್ತಿರುವ ಶಾಸಕರ ಕಾರ್ಯವೈಖರಿಗೆ ಫಲಾನುಭವಿಗಳು ಆನಂದ ಭಾಷ್ಪ ಹರಿಸಿದರು.
ಯುವರಾಜಣ್ಣಾ ಕದಂ, ಮೃಣಾಲ ಹೆಬ್ಬಾಳಕರ್, ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಕರ್ತರು ಈ ಸಂದರ್ಭದಲ್ಲಿ ಇದ್ದರು.