ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಪೂರ್ವ ನಿರ್ಧಾರದಂತೆ ಕರೆಕೊಟ್ಟ ಪಂಚಮಸಾಲಿ ಸಮುದಾಯ 2ಎ ಮೀಸಲಾತಿಗೆ ಆಗ್ರಹಿಸಿ ನಡೆಸಲಿರುವ ಹೋರಾಟಕ್ಕೆ ಸರ್ಕಾರ ಇದೀಗ ಆಘಾತ ನೀಡಿದೆ.
ಜಯಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ನಾಳೆ ಮತ್ತು ನಾಡಿದ್ದು ಸುವರ್ಣಸೌಧ ಮುತ್ತಿಗೆ ಹಾಕುವ ಮೂಲಕ ಮೀಸಲಾತಿಗಾಗಿ ಪ್ರತಿಭಟನೆ ಮಾಡಲಾಗುವುದು ಎಂದು ಸ್ವಾಮೀಜಿ ಘೋಷಣೆ ಮಾಡಿದ್ದರು.
ಆದರೆ ಟ್ರ್ಯಾಕ್ಟರ್ ಮೂಲಕ ಬೃಹತ್ ಮಟ್ಟದಲ್ಲಿ ಪ್ರತಿಭಟನೆ ಸಾಗಿಬರುವುದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯನ್ನು ಮನಗಂಡು ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಹೋರಾಟದ ಭಾಗವಾಗಿ ಬರುವ ಟ್ರ್ಯಾಕ್ಟರ್, ಕ್ರೂಸರ್ ವಾಹನಗಳಿಗೆ ಬೆಳಗಾವಿ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಅಧಿವೇಶನಕ್ಕೆ ಆಗಮಿಸುವ ಶಾಲಾ ಮಕ್ಕಳು, ಸಾರ್ವಜನಿಕರಿಗೆ ತೊಂದರೆಯಾಗಬಾರದೆಂದು ಈ ಕ್ರಮ ಕೈಗೊಳ್ಳಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ