*ಕುಷ್ಠರೋಗ ಪ್ರಕರಣಗಳ ಪತ್ತೆ ಹಚ್ಚುವ ಅಭಿಯಾನ ಯಶಸ್ವಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕರೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕುಷ್ಠರೋಗ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿರುವ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನವನ್ನು ಯಶ್ವಸಿಗೊಳಿಸಬೇಕು. ಕುಷ್ಠರೋಗ ರೋಗ ಮುಕ್ತ ದೇಶ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಕರೆ ನಿಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಜು.19) ನಡೆದ ಕುಷ್ಠರೋಗ ಪ್ರಕರಣಗಳ ಪತ್ತೆ ಅಭಿಯಾನದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕುಷ್ಠ ರೋಗ ನಿಯಂತ್ರಣಕ್ಕೆ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಅಭಿಯಾನವನ್ನು ಯಶಸ್ವಗೊಳಿಸಲು ಸರ್ವ ರೀತಿಯ ಕ್ರಮಗಳನ್ನು ಕೈಗೊಳ್ಳುವದರ ಮೂಲಕ ಜಿಲ್ಲೆಯನ್ನು ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸುವ ದಿಶೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಬೇಕು ಎಂದು ತಿಳಿಸಿದರು.
ಕುಷ್ಠರೋಗ ಪ್ರಕರಣ ಪತ್ತೆಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ಅಗತ್ಯವಿದ್ದಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಪಡೆದುಕೊಂಡು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಹೆಚ್ಚಿನ ಪ್ರಕರಣಗಳು ಕಂಡು ಬರುವಂತಹ ಪ್ರದೇಶಗಳಲ್ಲಿ ಗುರುತಿಸಿ, ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಪರೀಕ್ಷೆಗೆ ಬೇಕಾಗುವಂತಹ ಸಿಬ್ಬಂದಿಗಳ ಪಟ್ಟಿಯನ್ನು ತಯಾರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿಲ್ಲಾ ಆರೋಗ್ಯಾಧಿಕಾರಿ ಮಹೇಶ್ ಕೋಣಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಗೀತಾ ಪಿ.ಕಾಂಬಳೆ, ಎಡಿಎಚ್.ಓ ಗಡಾಡಿ, ಡಿಟಿಓ ಡಾ. ಚಾಂದನಿ ದೇವಡಿ, ಎಡಿಎಲ್ ಭರತ್ ಬಹುರೂಪಿ, ಆರೋಗ್ಯ ಇಲಾಖೆ ತಾಲೂಕಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ ಕುರಿತ ಪ್ರಚಾರ ಸಾಮಗ್ರಿ ಹಾಗೂ ಭಿತ್ತಿ ಪತ್ರಗಳನ್ನು ಜಿಲ್ಲಾಧಿಕಾರಿ ಮೊಹಮದ್ ರೋಷನ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರುಗಳು ಬಿಡುಗಡೆ ಗೊಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ