ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಜಿಲ್ಲೆಯ ರಾಮತೀರ್ಥ ನಗರದಲ್ಲಿರುವ ಸರ್ಕಾರಿ ವಿಶೇಷ ದತ್ತು ಸ್ವೀಕಾರ ಕೇಂದ್ರಕ್ಕೆ ಶನಿವಾರ (ನ.30) ಭೇಟಿ ನೀಡಿ ಮಕ್ಕಳ ಆರೋಗ್ಯವನ್ನು ಪರಿಶೀಲಿಸಿದರು.
ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಮಕ್ಕಳಿಗೆ ಆಗತ್ಯವಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಸರಿಯಾಗಿ ನಿರ್ವಹಿಸುವಂತೆ ದತ್ತು ಸ್ವೀಕಾರ ಕೇಂದ್ರದ ಮುಖ್ಯಸ್ಥರಿಗೆ ಹಾಗೂ ಮಕ್ಕಳ ಆರೋಗ್ಯ ಮತ್ತು ಕಾಳಜಿಯ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಅವರ ಕುಟುಂಬ, ಜಿಲ್ಲಾ ನಿರೂಪಣಾಧಿಕಾರಿಗಳಾದ ಅಣ್ಣಪ್ಪ ಹೆಗಡೆ, ಸಚಿನ ಹಿರೇಮಠ ಮಕ್ಕಳ ರಕ್ಷಣಾಧಿಕಾರಿ (ಅಸಾಂಸ್ಥಿಕ ಸೇವೆ) ಹಾಗೂ ಸಂಸ್ಥೆಯ ಎಲ್ಲ ಸಿಬ್ಬಂದಿಗಳು ಹಾಜರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ