ಪ್ರಗತಿವಾಹಿನಿ ಸುದ್ದಿ: 15 ವರ್ಷಗಳಿಂದ ಅನಾಥೆಯಾಗಿ ಉಡುಪಿಯ ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಆಶ್ರಯ ಪಡೆದುಕೊಂಡಿದ್ದ ಖುಷ್ಟು ಸುಮೇರಾ (21) ಅವರನ್ನು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಅಂಬುತೀರ್ಥದ ದಿನೇಶ್ ಎ.ಪಿ. ಅವರ ಪುತ್ರ ಕೃಷಿಕ ಹಾಗೂ ಕೇಟರಿಂಗ್ ಉದ್ಯಮ ನಡೆಸುವ ಮಧುರಾಜ್ ಎ.ಡಿ. (29) ಅವರು ಮದುವೆ ಆಗಿದ್ದು, ಉಡುಪಿ ಜಿಲ್ಲಾಧಿಕಾರಿ ಮುಂದೆ ನಿಂತು ಶಾಸ್ತೋಕ್ತವಾಗಿ ಕನ್ಯಾದಾನ ಮಾಡುವ ಮೂಲಕ ಸುದ್ದಿಯಾಗಿದ್ದಾರೆ.
ಖುಷ್ಣು ಸುಮೇರಾ ಮತ್ತು ಮಧುರಾಜ್ ಉಡುಪಿ ಸಮೀಪದ ನಿಟ್ಟೂರಿನಲ್ಲಿರುವ ರಾಜ್ಯ ಮಹಿಳಾ ನಿಲಯದಲ್ಲಿ ವಿವಾಹ ಕಾರ್ಯಕ್ರಮ ನಡೆದಿದ್ದು, ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರು ಶುಭಮುಹೂರ್ತದಲ್ಲಿ ಮುಂದೆ ನಿಂತು ಶಾಸ್ರೋಕ್ತವಾಗಿ ಕನ್ಯಾದಾನ ಮಾಡಿದರು. ಜಿಲ್ಲಾಡಳಿತದ ನೇತೃತ್ವದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಮಹಿಳಾ ನಿಲಯದ ಸಹಯೋಗದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ಗಣ್ಯರು ಹಾಗೂ ಮಹಿಳಾ ನಿಲಯದ ಸಹ ನಿವಾಸಿನಿಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಖುಷ್ಟು ಸುಮೇರಾ ಮೂಲತಃ ರಾಜಸ್ಥಾನದ ಜೋದ್‌ಪುರದವರಾಗಿದ್ದು, ಅನಾಥೆಯಾಗಿ 6 ವರ್ಷವಿರುವಾಗ ಬಾಲಮಂದಿರ ಸೇರಿದ್ದರು. ಕಳೆದ ಮೂರು ವರ್ಷಗಳಿಂದ ಮಹಿಳಾ ನಿಲಯದಲ್ಲಿ ವಾಸವಾಗಿದ್ದಾರೆ. ಕಳೆದ ಜನವರಿ- ಫೆಬ್ರವರಿ ತಿಂಗಳಿನಿಂದ ಜಿಲ್ಲಾಡಳಿತದ ನೇತೃತ್ವದಲ್ಲಿ ವಿವಾಹ ಸಂಬಂಧಿ ಮಾತುಕತೆಗಳು ಆರಂಭಗೊಂಡಿದ್ದವು. ಈ ವೇಳೆ ವಧು-ವರರ ಪರಸ್ಪರ ಸಮ್ಮತಿ, ಇಬ್ಬರ ಆರೋಗ್ಯ ಪರೀಕ್ಷೆ, ವರನ ಕುಟುಂಬದ ಹಿನ್ನೆಲೆ, ಆದಾಯದ ಪರಿಶೀಲನೆಗಳನ್ನು ನಡೆಸಲಾಗಿತ್ತು. ಎಲ್ಲಾ ವಿವರಗಳನ್ನು ಕಲೆ ಹಾಕಿದ ಬಳಿಕವೇ ಜಿಲ್ಲಾಡಳಿತ ಈ ವಿವಾಹಕ್ಕೆ ಒಪ್ಪಿಗೆ ಸೂಚಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ