Belagavi NewsBelgaum NewsKannada NewsKarnataka News

*ಸೆ.19 ರಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಸರ್ಕಾರದ ಸೂಚನೆಯನ್ವಯ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಸೂಕ್ತ ಪರಿಹಾರ ನೀಡುವ ಉದ್ದೇಶದಿಂದ ಪ್ರಜಾ ಸೇವೆ ಆಂದೋಲನ ಸಭೆಯು ದಿನಾಂಕ:19-09-2026 (ಶನಿವಾರ)ರಂದು ಯರಗಟ್ಟಿಯ ಶ್ರೀಶೈಲ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 11, ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜರುಗಲಿದೆ.

ಸಭೆಯಲ್ಲಿ ಸ್ಥಳೀಯ ಶಾಸಕರು ಉಪಸ್ಥಿತರಿರಲಿದ್ದು, ಯರಗಟ್ಟಿ/ಸವದತ್ತಿ ತಾಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button