ಬಿಜೆಪಿ ಜಾತಿ, ಧರ್ಮದ ಮೇಲೆ ರಾಜಕಾರಣ ಮಾಡುತ್ತಿದ್ದು, ರಾಜ್ಯದ ಜನ ಬೇಸತ್ತಿದ್ದಾರೆ ಎಂದು ಮಧು ಬಂಗಾರಪ್ಪ ವಾಗ್ದಾಳಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಓಬಿಸಿ ಸಮುದಾಯದ ಜನರನ್ನು ಒಗ್ಗೂಡಿಸುವ ಕೆಲಸ ಮಾಡಲಾಗುವುದು ಎಂದು ಕಾಂಗ್ರೆಸ್ ಓಬಿಸಿ ಘಟಕದ ನೂತನ ಅಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಓಬಿಸಿ ಘಟಕದ ಅಧ್ಯಕ್ಷನಾದ ನಂತರ ರಾಜ್ಯವನ್ನು ಸುತ್ತಿ ಪಕ್ಷ ಸಂಘಟನೆ ಮಾಡುವ ಕಾರ್ಯವನ್ನು ಮಾಡುತ್ತಿದ್ದೇನೆ. ಇದಕ್ಕೆ ಪೂರಕವಾಗಿ ಜಿಲ್ಲೆಯಾದ್ಯಂತ ಓಬಿಸಿ ಸಮಾವೇಶಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.
ಚುನಾವಣೆಯಲ್ಲಿ ಮತಗಳನ್ನು ಗಮನಿಸಿದಾಗ ಶೇ.52 ರಿಂದ 58 ರಷ್ಟು ಮತಗಳು ಓಬಿಸಿ ಅವರದ್ದೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಮಂಡ್ಯ, ಮೈಸೂರು, ಚಾಮರಾಜನಗರದ ಪ್ರವಾಸ ಮಾಡಿದ್ದೇನೆ. ಈಗ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯಲ್ಲಿ ಎಸ್ಸಿ, ಎಸ್ಟಿ ಸೇರಿದಂತೆ ಓಬಿಸಿ ಸಮೂದಾಯವನ್ನು ಒಗ್ಗೂಡಿಸಲಾಗುವುದು ಎಂದರು.
ಕಾಂಗ್ರೆಸ್ ಪಕ್ಷ ವಿಶೇಷವಾಗಿ ಹಿಂದೂಳಿದ ಜನರ ಅಭಿವೃದ್ಧಿಗೆ ಪೂರಕವಾಗಿ ಯೋಜನೆ ರೂಪಿಸುತ್ತದೆ. ಅದೇ ಬಿಜೆಪಿ ಜಾತಿ ಧರ್ಮದ ಮೇಲೆ ರಾಜಕಾರಣ ಮಾಡುತ್ತಿದ್ದಾರೆ. ಇದರಿಂದ ರಾಜ್ಯದ ಜನರು ಬೇಸತ್ತು ಹೋಗಿದ್ದು, ಬದಲಾವಣೆ ಬಯಸಿದ್ದಾರೆ. ಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿಶ್ಚಿತವೆಂದು ತಿಳಿಸಿದರು.
ನಮ್ಮ ತಂದೆ ಬಂಗಾರಪ್ಪ ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡಿದ್ದೇನೆ. ಬಂಗಾರಪ್ಪ ಅವರು ಸಿಎಂ ಆಗಿದ್ದಾಗ ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಕಲ್ಪಿಸಿದರು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದೀಗ ವಿದ್ಯುತ್ ಖಾಸಗೀಕರಣಗೊಳಿಸಿ ರೈತರಿಗೆ ಕೊಡುವ ಉಚಿತ ವಿದ್ಯುತ್ ಅನ್ನು ಹೊಡೆಯುವ ಹುನ್ನಾರ ನಡೆಸಿದ್ದಾರೆ. ಕಿಸಾನ್ ಸಮ್ಮಾನ ಯೋಜನೆ ಹೆಸರಿನಲ್ಲಿ ರೈತರಿಗೆ ಎಕರೆಗೆ 6,000 ಹಣ ಕೊಟ್ಟು ಬೇರೆಡೆಯಿಂದ 60,000 ಹಣ ಪಡೆದಿದ್ದಾರೆ ಎಂದು ಆರೋಪಿಸಿದರು.
ಈಗಾಗಲೇ 2023ರ ವಿಧಾನಸಭೆ ಚುನಾವಣೆಗೆ ತಯಾರಿ ನಡೆದಿದ್ದು, ಕಾಂಗ್ರೆಸ್ ಪಕ್ಷದಿಂದ ಜಿಲ್ಲಾವಾರು ಪ್ರಣಾಳಿಕೆ ಸಿದ್ದಪಡಿಸಲಾಗುತ್ತಿದೆ. ಈಚೆಗೆ ಕಲಬುರಗಿಯಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಕ್ರಾಂತಿ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುಮ ಖರ್ಗೆಯವರು 10 ಅಂಶಗಳನ್ನು ಆ ಭಾಗದ ಜನರಿಗಾಗಿ ಜಾರಿ ತರುವುದಾಗಿ ಹೇಳಿದ್ದಾರೆ. ಇನ್ನು ಮಾಜಿ ಸಿಎಂ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ. ಬಿಜೆಪಿಯವರ ಹಾಗೇ 300 ಭರವಸೆಗಳನ್ನು ನೀಡಿ 30 ಭರವಸೆ ಈಡೇರಿಸಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್ ಹಣಮನ್ನವರ್, ಅರಬಾವಿ ಕ್ಷೇತ್ರದ ಕಾಂಗ್ರೆಸ್ ಮುಖಂಡ ಅರವಿಂದ್ ಪಾಟೀಲ್ ಸೇರಿದಂತೆ ಮುಂಚೂಣಿ ಘಟಕದ ಪದಾಧಿಕಾರಿಗಳು ಇದ್ದರು.
https://pragati.taskdun.com/d-k-shivakumar-invites-suggestions-from-kannadiga-nris-for-global-karnataka-better-karnataka/
ಸಾಂಬ್ರಾ ಜನರಿಗೆ ಗುಡ್ ನ್ಯೂಸ್: ಗ್ರಾಮ ಒನ್ ಕೇಂದ್ರ ಉದ್ಘಾಟಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್
https://pragati.taskdun.com/good-news-for-people-of-sambra-mla-lakshmi-hebbalkar-inaugurates-village-one-centre/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ