Kannada NewsKarnataka NewsLatest

*ದಿತ್ವಾ ಚಂಡ ಮಾರುತ: ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; ರೆಡ್ ಅಲರ್ಟ್ ಘೋಷಣೆ*

ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮಳೆ


ಪ್ರಗತಿವಾಹಿನಿ ಸುದ್ದಿ: ದಿತ್ವಾ ಚಂಡ ಮಾರುತದ ಅಬ್ಬರಕ್ಕೆ ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ.

ಕರ್ನಾಟಕದಲ್ಲಿಯೂ ದಿತ್ವಾ ಚಂಡಮಾರುತ ಪರಿಣಾಮ ಬೀರಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಜಾನೆಯಿಂದಲೇ ಮಳೆಯಾಗುತ್ತಿದ್ದು, ಮೈಕೊರೆವ ಚಳಿಗೆ ಜನರು ತತ್ತರಿಸುವಂತಾಗಿದೆ.

ಚಂಡಮಾರುತ ಹಿನನ್ನೆಲೆಯಲ್ಲಿ ಬೆಂಗಳೂರು ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಇನ್ನೂ 2-3 ದಿನಗಳ ಕಾಲ ಮೋಡಕವಿದ ವಾತಾವರಣ, ಮಳೆ ಇರಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ತಮಿಳುನಾಡು, ಆಂಧ್ರ ಕರಾವಳಿ, ಪುದುಚೇರಿಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ತಮಿಳುನಾಡಿನ ಕಡಲೂರು, ನಾಗಪಟ್ಟಣಂ, ಮೈಲಾಡುತುರೈ, ವಿಲ್ಲುಪುರಂ, ಚಂಗಲ್ಪಟ್ಟು, ಪುದುಚೇರಿ-ಕಾರೈಕಲ್ ನಲ್ಲಿ ಬಿರುಗಾಳಿ ಸಹಿತ ಮಳೆ ಅಬ್ಬರ ಜೋರಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button