Latest

3 ಇಲಾಖೆಗಳ ಶೀಘ್ರ ವಿಭಜನೆ: ಗೋವಿಂದ ಕಾರಜೋಳ ಸೂಚನೆ

 

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು  : ಲೋಕೋಪಯೋಗಿ ಇಲಾಖೆ, ನೀರಾವರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯನ್ನು ಶೀಘ್ರವಾಗಿ ವಿಭಜಿಸುವಂತೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಸೂಚಿಸಿದರು.

ವಿಧಾನಸೌಧದಲ್ಲಿಂದು ಇಲಾಖೆಗಳನ್ನು ವಿಭಜಿಸುವ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಇಲಾಖೆಗಳನ್ನು ವಿಭಜಿಸಲು ಕಳೆದ ಹಲವಾರು ವರ್ಷಗಳಿಂದ ಪ್ರಯತ್ನಿಸಲಾಗುತ್ತಿದೆ. ಇಂಜಿನಿಯರ್‍ಗಳು ಹಾಗೂ ಇಂಜಿನಿಯರಿಂಗ್ ಸಂಘದ ಪದಾಧಿಕಾರಿಗಳ ಅಭಿಪ್ರಾಯವನ್ನು ಪಡೆಯಲಾಗಿದೆ. ಈ ಮೂರು ಇಲಾಖೆಗಳಿಂದ ಮಾಹಿತಿ ಕ್ರೂಡೀಕರಿಸಲಾಗಿದೆ. ಸಾಧಕ ಬಾಧಕಗಳ ಕುರಿತು ಚರ್ಚಿಸಲಾಗಿದೆ. ವಿಭಜಿಸುವ ನಿರ್ಣಯವನ್ನು ಕೈಗೊಳ್ಳಲಾಗಿದೆ.

Home add -Advt

ಇದು ಉತ್ತಮ ನಿರ್ಧಾರವಾಗಿದೆ. ನೀರಾವರಿ ಸಚಿವರು ಹಾಗೂ ಗ್ರಾಮೀಣಾವೃದ್ಧಿ ಸಚಿವರು ಇಲಾಖೆಗಳ ವಿಭಜನೆ ನಿರ್ಣಯಕ್ಕೆ ಸಹಮತ ವ್ಯಕ್ತಪಡಿಸಿ, ಸಹಕರಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ನೀರಾವರಿ ಸಚಿವರಿಗೆ ಡಿಸಿಎಂ ಧನ್ಯವಾದಗಳನ್ನು ವ್ಯಕ್ತಪಡಿಸಿದ, ಶೀಘ್ರವಾಗಿ ವಿಭಜನೆಯ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್. ಈಶ್ವರಪ್ಪ, ಬೃಹತ್ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ, ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಕಾರ್ಯದರ್ಶಿ ಬಿ. ಗುರುಪ್ರಸಾದ್, ನೀರಾವರಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ  ಎಲ್. ಕೆ. ಅತೀಕ್, ಡಿಸಿಎಂ ಅವರ ಆಪ್ತ ಕಾರ್ಯದರ್ಶಿ  ವಿ. ಶ್ರೀನಿವಾಸ್, ವಿವಿಧ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Back to top button