
ಪ್ರಗತಿವಾಹಿನಿ ಸುದ್ದಿ: ಭಾರತದ ಯುವ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ 2025ರ ಮಹಿಳಾ ಚೆಸ್ ವಿಶ್ವಕಪ್ ಗೆಲ್ಲುವ ಮೂಲಕ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.
ಜಾರ್ಜಿಯಾದಲ್ಲಿ ನಡೆದ ವಿಶ್ವಕಪ್ ಫೈನಲ್ ನಲ್ಲಿ ಭಾರತದ ಲೆಜೆಂಡರಿ ಆಟಗಾರ್ತಿ ಕೊನೆರು ಹಂಪಿ ಅವರನ್ನು ಸೋಲಿಸುವ ಮೂಲಕ ೧೯ ವರ್ಷದ ದಿವ್ಯಾ ದೇಶಮುಖ್ ಮಹಿಳಾ ಚೆಸ್ ವಿಶ್ವಕಪ್ ಗೆದ್ದಿದ್ದಾರೆ.
ಈ ಮೂಲಕ ಚೆಸ್ ವಿಶ್ವಕಪ್ ಗೆದ್ದ ಮೊದಲ ಭಾರತೀಯ ಮಹಿಳಾ ಚೆಸ್ ತಾರೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕಳೆದ ವರ್ಷವೇ ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದಿದ್ದ ದಿವ್ಯಾ, ಈ ವರ್ಷ ಮಹಿಳಾ ಚೆಸ್ ವಿಶ್ವಕಪ್ ನ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.