
ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಗಳು ನೀರುಪಾಲಾಗಿದ್ದು, ಮನೆ-ಮಠ ಕಳೆದುಕೊಂಡ ಜನರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ವರುಣಾರ್ಭಟಕ್ಕೆ ಜೀನ ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಈ ನಡುವೆ 50 ವರ್ಷಗಳಲ್ಲೇ ಕಂಡು ಕೇಳರಿಯದ ಭೀಕರ ಮಳೆ ಇದಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಬರದನಾಡು ಚಿಕ್ಕಬಳ್ಳಾಪುರದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, 50 ವರ್ಷಗಳ ಇತಿಹಾಸದಲ್ಲೇ ಇಂತಹ ಮಳೆ ನೋಡಿಲ್ಲ ಎಂದು ಡಾ.ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಅಪಾರಪ್ರಮಾಣದ ಬೆಳೆ ಹಾನಿ, 436 ಮನೆಗಳು ನೆಲಸಮವಾಗಿವೆ. ಮನೆ ಕುಸಿತದಿಂದ ಸಂಕಷ್ಟಕ್ಕೀಡಾದವರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ. ಜಿಲ್ಲೆಯಲ್ಲಿ ಮೂರು ಜನರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಜನರು ನೀರಿಗಿಳಿಯುವ ದುಸ್ಸಾಹಸ ಮಾಡಬಾರದು. ಜಾಗರೂಕರಾಗಿರುವಂತೆ ಸೂಚಿಸಿದರು.




