Latest

ಡಿ.ಕೆ.ಶಿವಕುಮಾರ್ ಗೆ ಜಾಮೀನು ನಿರಾಕರಣೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ -ಅಕ್ರಮ ಹಣ ವರ್ಗಾವಣೆ ಮತ್ತು ಬೇನಾಮಿ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಿಚಾರಣೆ ನಡೆಸುತ್ತಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ ಅವರಿಗೆ ಜಾಮೀನು ನಿರಾಕರಿಸಲಾಗಿದೆ.

ಇದರಿಂದಾಗಿ ಅಕ್ಟೋಬರ್ 3ರ ವರೆಗೂ ಅವರು ನ್ಯಾಯಾಂಗ ಬಂಧನದಲ್ಲೇ ಇರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಆದಾಗ್ಯ ಈ ತೀರ್ಪು ಪ್ರಶ್ನಿಸಿ ಅವರು ಸುಪ್ರಿಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬಹುದಾಗಿದೆ.

ಕಳೆದ ಸುಮಾರು 20 ದಿನದಿಂದ ಡಿ.ಕೆ.ಶಿವಕುಮಾರ ವಿಚಾರಣೆ ಎದುರಿಸುತ್ತಿದ್ದಾರೆ. 15 ದಿನದ ಹಿಂದೆ ಶಿವಕುಮಾರ ಅವರನ್ನು ಇಡಿ ಬಂಧಿಸಿತ್ತು. ನಂತರ ಅವರನ್ನು ನ್ಯಾಯಂಗ ಬಂಧನಕ್ಕೆ ಒಪ್ಪಿಸಿ ತಿಹಾರ್ ಜೈಲಿನಲ್ಲಿ ಇಡಲಾಗಿತ್ತು. ಡಿ.ಕೆ.ಶಿವಕುಮಾರ ಅವರಿಗೆ ಜಾಮೀನು ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ಸಂಬಂಧ  ಕಳೆದ ವಾರ ವಾದ -ಪ್ರತಿವಾದ ನಡೆದಿತ್ತು.

ಅನಾರೋಗ್ಯ ಕಾರಣದಿಂದ ಅವರಿಗೆ ಜಾಮೀನು ನೀಡಬೇಕು ಎಂದು ಅವರ ಪರ ವಕೀಲರು ವಾದಿಸಿದ್ದರೆ, ವಿಚಾರಣೆ ಇನ್ನೂ ಸಾಕಷ್ಟಿರುವುದರಿಂದ ಜಾಮೀನು ನೀಡಬಾರದು ಎಂದು ಇಡಿ ಪರ ವಕೀಲರು ವಾದಿಸಿದ್ದರು. ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ಅದರ ತೀರ್ಪನ್ನು ಇಂದಿಗೆ ಕಾಯ್ದಿರಿಸಿದ್ದರು.

ಇಂದು ತೀರ್ಪು ಹೊರಬೀಳುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಆವರಣದಲ್ಲಿ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ಡಿ.ಕೆ.ಶಿವಕುಮಾರ ಅವರ ಅಭಿಮಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.

ಸಂಬಂಧಿಸಿದ ಸುದ್ದಿಗಳು –

25ರ ವರೆಗೂ ಡಿ.ಕೆ.ಶಿವಕುಮಾರ ಬಿಡುಗಡೆ ಇಲ್ಲ

ಶನಿವಾರದವರೆಗೂ ಡಿ.ಕೆ.ಶಿವಕುಮಾರ ತಿಹಾರ ಜೈಲಲ್ಲೇ

ಇಂದೇ ವಿಚಾರಣೆಗೆ ಹಾಜರಾಗಲಿರುವ ಡಿ.ಕೆ.ಶಿವಕುಮಾರ

ಇವುಗಳನ್ನೂ ಓದಿ –

ಬಸ್ ಚಾಲಕನನ್ನು 24 ಗಂಟೆಯಲ್ಲಿ ಬಂಧಿಸಿ -ನ್ಯಾಯಾಲಯ ಆದೇಶ

ವಿದ್ಯಾರ್ಥಿಗಳ ಮೇಲೆ ಬಸ್ ಹತ್ತಿಸಲು ಯತ್ನಿಸಿದ್ದ ಬಸ್ ಚಾಲಕ ಅಮಾನತು -ವಿದ್ಯಾರ್ಥಿಗಳಿಂದ ರಸ್ತೆ ತಡೆ -Updated News

ಸೇನೆಗೆ ಸೇರಬೇಕೆ? ಅರ್ಜಿ ಹಾಕಲು ಇಲ್ಲಿದೆ ಮಾಹಿತಿ

ಮಳೆ ಅವಾಂತರ: ವಿದ್ಯುತ್ ಅವಘಡದಿಂದ ನೇಕಾರ ಸಾವು 

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button