Karnataka NewsLatestPolitics

*ಸಿಎಂ ಡಿ.ಕೆ. ಶಿವಕುಮಾರ್ ಮೆಟ್ರೋ ಪ್ರಯಾಣ: ಜೀರೋ ಟ್ರಾಫಿಕ್ ತಪ್ಪಿಸಲು ಭಾನುವಾರ ಸಾರ್ವಜನಿಕ ಸಾರಿಗೆಗೆ ಆದ್ಯತೆ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಸಾರ್ವಜನಿಕರಿಗೆ ಜೀರೋ ಟ್ರಾಫಿಕ್‌ನಿಂದ ಉಂಟಾಗುವ ವಾಹನ ಸಂಚಾರದ ತೊಂದರೆಯನ್ನು ತಪ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ (ಜೂನ್ 7) ಬೆಳಗ್ಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲು ತೀರ್ಮಾನಿಸಿದ್ದಾರೆ.


ನಿಗದಿತ ಕಾರ್ಯಕ್ರಮದಂತೆ, ಬೆಳಗ್ಗೆ 9.00 ಗಂಟೆಗೆ ವಿಧಾನಸೌಧದ ಎದುರಿನ ಮೆಟ್ರೋ ನಿಲ್ದಾಣದಿಂದ ಕನಕಪುರ ರಸ್ತೆ ಕೊನೆಯ ಮೆಟ್ರೋ ನಿಲ್ದಾಣದವರೆಗೆ ಸಿಎಂ ಮೆಟ್ರೋ ರೈಲಿನಲ್ಲಿ ಸಂಚರಿಸಲಿದ್ದಾರೆ.

Home add -Advt


ಮುಖ್ಯಮಂತ್ರಿಗಳು ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ಹಾಗೂ ಕನಕಪುರ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಜನರಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಭಾನುವಾರ ಬೆಳಗ್ಗೆ 10.00 ಗಂಟೆಯಿಂದ ರಾತ್ರಿ 9.00 ಗಂಟೆಯವರೆಗೆ ‘ಕೃತಜ್ಞತೆ ಸಮರ್ಪಣಾ ಪ್ರವಾಸ’ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.


ಸಾಮಾನ್ಯವಾಗಿ ಮುಖ್ಯಮಂತ್ರಿ ನಿವಾಸ ಸದಾಶಿವನಗರದಿಂದ ಕನಕಪುರ ರಸ್ತೆವರೆಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಜಾರಿಗೊಳಿಸಿದರೆ ಸಾರ್ವಜನಿಕ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇರುವುದನ್ನು ಪರಿಗಣಿಸಿ, ಜನಸ್ನೇಹಿ ಕ್ರಮವಾಗಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.


ಸಿಎಂ ಅವರ ಈ ನಡೆ ಸಾರ್ವಜನಿಕರ ಅನುಕೂಲಕ್ಕೆ ಆದ್ಯತೆ ನೀಡುವ ಜೊತೆಗೆ, ನಗರದಲ್ಲಿ ಸಾರ್ವಜನಿಕ ಸಾರಿಗೆ ಬಳಕೆಗೆ ಉತ್ತೇಜನ ನೀಡುವ ಸಂದೇಶವನ್ನೂ ಸಾರುತ್ತಿದೆ.

Related Articles

Back to top button