Latest

ಅಕ್ಟೋಬರ್ 25ರ ವರೆಗೆ ಡಿ.ಕೆ.ಶಿವಕುಮಾರ್ ಗೆ ನ್ಯಾಯಾಂಗ ಬಂಧನ

ಪ್ರಗತಿವಾಹಿನಿ ಸುದ್ದಿ, ನವದೆಹಲಿ -ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ ಅವರ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆಯಾಗಿದೆ. ಇನ್ನೂ 10 ದಿನಗಳವರೆಗೆ ಅಂದರೆ ಅ.25ರ ವರೆಗೆ ಅವರ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಈ ಹಿಂದೆ ವಿಧಿಸಿದ ನ್ಯಾಯಾಂಗ ಬಂದನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಡಿ.ಕೆ.ಶಿವಕುಮಾರ ಪರ ವಕೀಲರು ಜಾಮೀನು ನೀಡುವಂತೆ ಮತ್ತೆ ಅರ್ಜಿ ಸಲ್ಲಿಸಿದ್ದರು. ಆದರೆ ಜಾರಿ ನಿರ್ದೇಶನಾಲಯ, ಇನ್ನೂ ವಿಚಾರಣೆ ಪ್ರಾಥಮಿಕ ಹಂತದಲ್ಲೇ ಇರುವುದರಿಂದ ಈ ಸಂದರ್ಭದಲ್ಲಿ ಜಾಮೀನು ನೀಡುವುದು ಸರಿಯಲ್ಲ ಎಂದು ವಾದ ಮಂಡಿಸಿತು.

ಈ ಹಿನ್ನೆಲೆಯಲ್ಲಿ ನ್ಯಾಯಾಲದ ನ್ಯಾಯಾಂಗ ಬಂಧನವನ್ನು ಮತ್ತೆ 10 ದಿನಗಳವರೆಗೆ ವಿಸ್ತರಿಸಿದೆ. ಇದರಿಂದಾಗಿ ಸತತ ಮೂರನೇ ಬಾರಿಗೆ ಡಿ.ಕೆ.ಶಿವಕುಮಾರ ಅವರ ನ್ಯಾಯಾಂಗ ಬಂಧನ ವಿಸ್ತರಿಸಿದಂತಾಗಿದೆ.

ಈ ಮಧ್ಯೆ, ಡಿ.ಕೆ.ಶಿವಕುಮಾರ ಅವರ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟೀಸ್ ಜಾರಿ ಮಾಡಿದೆ. ಇದರಿಂದಾಗಿ ಕುಟುಂಬದ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಿದಂತಾಗಲಿದೆ.

Home add -Advt

ಸೆಪ್ಟಂಬರ್ 3ರಂದು ಜಾರಿ ನಿರ್ದೇಶನಲಾಯ ಡಿ.ಕೆ.ಶಿವಕುಮಾರ ಅವರನ್ನು ತನ್ನ ವಶಕ್ಕೆ ಪಡೆದಿತ್ತು. ಕಳೆದ ಒಂದೂವರೆ ತಿಂಗಳಿನಿಂದ ಡಿ.ಕೆ.ಶಿವಕುಮಾರ ಬಂಧನದಲ್ಲೇ ಇದ್ದಾರೆ.

Related Articles

Back to top button