Karnataka NewsLatest

ಡಿ.ಕೆ.ಶಿವಕುಮಾರ ಬೆಳಗಾವಿ, ಬಾಗಲಕೋಟೆ ಪ್ರವಾಸ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಡಿ.ಕೆ.ಶಿವಕುಮಾರ ಕೆಪಿಸಿಸಿ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಸೋಮವಾರ ಬೆಳಗ್ಗೆ 9 ಗಂಟೆಗೆ ಬೆಳಗಾವಿಗೆ ಆಗಮಿಸಲಿರುವ ಅವರು ಗೋಕಾಕ ಮತ್ತು ಅರಬಾವಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

Related Articles
Home add -Advt

2.30ಕ್ಕೆ ಘಟಪ್ರಭಾಕ್ಕೆ ಆಗಮಿಸಿ ಸೇವಾದಳ ತರಬೇತಿ ಶಿಬಿರ ವೀಕ್ಷಿಸುವರು. 4 ಗಟೆಗೆ ಘಟಪ್ರಭಾದಲ್ಲಿ ಬೆಳಗಾವಿ ನಗರ, ಗ್ರಾಮಾಂತರ ಹಾಗೂ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಿದ್ದಾರೆ.

ರಾತ್ರಿ ಬೆಳಗಾವಿಯಲ್ಲಿ ವಾಸ್ತವ್ಯ ಮಾಡಿ ಮಂಗಳವಾರ ಜಮಖಂಡಿ ಹಾಗೂ ಮುಧೋಳದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ ನಡೆಸಲಿದ್ದಾರೆ.

1.30ಕ್ಕೆ ಬಾಗಲಕೋಟೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಭೆ ನಡೆಸಿ, ಬಾದಾಮಿಯ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡುವರು.

ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿ, ಬುಧವಾರ ಬೆಳಗ್ಗೆ ಬೆಂಗಳೂರಿಗೆ ತೆರಳುವರು.

Related Articles

Back to top button