Kannada NewsKarnataka NewsPolitics

*ಬಿಜೆಪಿಗೆ ಬಂದು ಡಿ.ಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ: ಪ್ರಲ್ಲಾದ್ ಜೋಶಿ ಹೇಳಿದ್ದೇನು.‌.?*

ಪ್ರಗತಿವಾಹಿನಿ ಸುದ್ದಿ: ಬಿಜೆಪಿಗೆ ಬಂದು ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ, ಬಿ.ವೈ. ವಿಜಯೇಂದ್ರ ಉಪಮುಖ್ಯಮಂತ್ರಿ ಆಗುತ್ತಾರೆ ಎಂಬ ವದಂತಿಗಳ ಬಗ್ಗೆ ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಊಹಾಪೋಹಗಳನ್ನು ಅಲ್ಲಗಳೆದಿದ್ದಾರೆ. ಅಂತಹ ಯಾವುದೇ ಯೋಚನೆ ನಮ್ಮ ಪಕ್ಷದ್ದಲ್ಲಿ  ಇಲ್ಲ. ಇನ್ನು ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳಿದ್ದರೂ, ಜನಾದೇಶಕ್ಕೆ ಗೌರವ ನೀಡಿ, ಸರ್ಕಾರಕ್ಕೆ ಐದು ವರ್ಷಗಳ ಅವಧಿ ಪೂರ್ಣಗೊಳಿಸಲು ಅವಕಾಶ ನೀಡಬೇಕೆಂಬುದು ಬಿಜೆಪಿಯ ನಿಲುವು ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಪ್ರಸ್ತುತ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಯಾವುದೇ ಉದ್ದೇಶ ಬಿಜೆಪಿಗೆ ಇಲ್ಲ ಎಂದು ಸ್ಪಷ್ಟಪಡಿಸಿದ ಜೋಶಿ, ನಮ್ಮ ಪಕ್ಷದ ನಿಲುವು ಸ್ಪಷ್ಟವಾಗಿದೆ. ಯಾವುದೇ ಕಾರಣಕ್ಕೂ ಈ ಸರ್ಕಾರದ ಅಸ್ಥಿರತೆಯನ್ನು ನಾವು ಬಯಸುವುದಿಲ್ಲ. ಈ ಸರ್ಕಾರ ಐದು ವರ್ಷಗಳ ಕಾಲ ತಮ್ಮ ಅವಧಿಯನ್ನು ಮುಗಿಸಬೇಕು, ಇದೇ ನಮ್ಮ ಆಶಯ ಎಂದರು.

Home add -Advt

Related Articles

Back to top button