ಇಂದೂ ಆಸ್ಪತ್ರೆಯಲ್ಲೇ ಇರಲಿದ್ದಾರೆ ಡಿ.ಕೆ.ಶಿವಕುಮಾರ

ಇಂದೂ ಆಸ್ಪತ್ರೆಯಲ್ಲೇ ಇರಲಿದ್ದಾರೆ ಡಿ.ಕೆ.ಶಿವಕುಮಾರ

ಪ್ರಗತಿವಾಹಿನಿ ಸುದ್ದಿ, ನವದೆಹಲಿ -ಮಾಜಿ ಸಚಿವ ಡಿ.ಕೆ.ಶಿವಕುಮಾರ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ. ಹಾಗಾಗಿ ಅವರು ಇಂದೂ ನ್ಯಾಯಾಂಗ ಬಂಧನದಲ್ಲಿ ಮುಂದುವರಿಯಲಿದ್ದಾರೆ. ಆದರೆ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಅವರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗುತ್ತದೆ.

ಬುಧವಾರ ಡಿ.ಕೆ.ಶಿವಕುಮಾರ ಅವರ ಜಾಮೀನು ಅರ್ಜಿ ವಿಚಾರಣೆ ಇತ್ತು. ಅವರ ಪರ ವಕೀಲ ಅಭಿಷೇಕ ಶಿಂಘ್ವಿ ವಾದ ಆರಂಭಿಸಿ, ದೆಹಲಿಯ ಅಪಾರ್ಟಮೆಂಟ್ ನಲ್ಲಿ ಸಿಕ್ಕಿರುವ ಹಣ ಸಚಿನ್ ನಾರಾಯಣ ಅವರದ್ದು. ಡಿ.ಕೆ.ಶಿವಕುಮಾರ ಅವರಿಗೂ ಆ ಹಣಕ್ಕೂ ಸಂಬಂಧವಿಲ್ಲ ಎಂದು ವಾದ ಮಂಡಿಸಿದರು. ಸಚಿನ್ ನಾರಾಯಣ 30 ಬಾರ್ ಹೊಂದಿದ್ದು ಅವರಿಗೆ ಹಣ ನಿರಂತರವಾಗಿ ಬರುತ್ತದೆ. ಅದಕ್ಕೆಲ್ಲ ದಾಖಲೆ ಇದ್ದು, ಅವರು ಸಲ್ಲಿಸಲಿದ್ದಾರೆ ಎಂದು ಅವರು ತಿಳಿಸಿದರು.

ಆದರೆ ಅವರ ವಾದ ಮುಗಿದರೂ ಜಾರಿ ನಿರ್ದೇಶನಾಲಯದ ಪರ ವಕೀಲ ನಟರಾಜ ನ್ಯಾಯಾಲಯಕ್ಕೆ ಹಾಜರಾಗಲೇ ಇಲ್ಲ. ಹಾಗಾಗಿ ಇಡಿ ಪರ ಕಿರಿಯ ವಕೀಲರು ವಿಚಾರಣೆಯನ್ನು ಮುಂದೂಡುವಂತೆ ಕೋರಿದರು. ಇದಕ್ಕೆ ಸಮ್ಮತಿಸಿದ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ನಾಳೆಗೆ ಮುಂದೂಡಿದರು. ಹಾಗಾಗಿ ಇಂದು ಜಾಮೀನು ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದ ಡಿ.ಕೆ.ಶಿವವಕುಮಾರ ಅವರಿಗೆ ನಿರಾಶೆಯಾಯಿತು.

ಆದರೆ, ಶಿವಕುಮಾರ ಅವರ ಆರೋಗ್ಯ ಸುಧಾರಿಸದ ಹಿನ್ನೆಲೆಯಲ್ಲಿ ಅವರಿಗೆ ರಾಮಮನೋಹರ ಲೋಹಿಯಾ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸುವ ಸಂಬಂಧ ವೈದ್ಯರು ನಿರ್ಧಾರ ಕೈಗೊಳ್ಳಲಿ ಎಂದು ನ್ಯಾಯಾಧೀಶರು ತಿಳಿಸಿದರು.  ಡಿ.ಕೆ.ಶಿವಕುಮಾರ ಅವರಿಗೆ ಜ್ವರ, ರಕ್ತದೊತ್ತಡ, ಸಕ್ಕರೆ ಕಾಯಿಲೆ ಮತ್ತು ಎದೆ ನೋವು ಇದ್ದು, ಅದಕ್ಕಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗಾಗಿ ಶಿವಕುಮಾರ ಅವರು ನಾಳೆಯ ವಿಚಾರಣೆಯವರೆಗೂ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ.

ನ್ಯಾಯಾಂಗ ಬಂಧನಕ್ಕೆ ಡಿ.ಕೆ.ಶಿವಕುಮಾರ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button