ಪ್ರಗತಿವಾಹಿನಿ ಸುದ್ದಿ, ನವದೆಹಲಿ- ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ ಗುರುವಾರ ನವದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರು.
48 ದಿನಗಳ ಕಾಲ ಜೈಲು ವಾಸ ಅನುಭವಿಸಿ ನಿನ್ನೆ ಬಿಡುಗಡೆಯಾಗಿರುವ ಶಿವಕುಮಾರ ಗುರುವಾರ ಸೋನಿಯಾ ಗಾಂಧಿ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು. ಕಾಂಗ್ರೆಸ್ ಪಕ್ಷ ನಿಮ್ಮ ಜೊತೆಗಿದೆ. ಕಾನೂನು ಹೋರಾಟಕ್ಕೆ ಎಲ್ಲ ರೀತಿಯ ನೆರವು ನೀಡಲಾಗುವುದು. ರಾಜಕೀಯ ಪ್ರೇರಿತವಾಗಿ ನಿಮ್ಮ ವಿರುದ್ಧ ನಡೆಯುತ್ತಿರುವ ಷಢ್ಯಂತ್ರಗಳಿಂದ ಧೃತಿಗೆಡುವ ಅಗತ್ಯವಿಲ್ಲ ಎಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಧೈರ್ಯ ತುಂಬಿದರು ಎಂದು ಗಾತ್ತಾಗಿದೆ.
ಇದಕ್ಕೂ ಮೊದಲು ಶಿವಕುಮಾರ ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ವೇಣುಗೋಪಾಲ ಅವರನ್ನೂ ಭೇಟಿಯಾಗಿ ಚರ್ಚಿಸಿದರು. ನವದೆಹಲಿಯಲ್ಲಿ ಇನ್ನೂ ಹಲವು ನಾಯಕರನ್ನು, ವಕೀಲರನ್ನು ಸಹ ಅವರು ಭೇಟಿ ಮಾಡಿದ್ದರು.
ಸಂಸದ, ಸಹೋದರ ಡಿ.ಕೆ.ಸುರೇಶ ಸಹ ಜೊತೆಗಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ