Kannada NewsKarnataka NewsLatest

ಹುಬ್ಬಳ್ಳಿ, ಹಾವೇರಿ, ಬೆಳಗಾವಿಗೆ ಡಿ.ಕೆ.ಶಿವಕುಮಾರ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಗುರುವಾರ ಮತ್ತು ಶುಕ್ರವಾರ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ.

ಗುರುವಾರ ಸಂಜೆ ಇಂಡಿಗೋ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಲಿರುವ ಶಿವಕುಮಾರ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಶುಕ್ರವಾರ ಬೆಳಗ್ಗೆ ಹಾವೇರಿ ಜಿಲ್ಲೆ ಮೈಲಾರದ ಮೈಲಾರ ಲಿಂಗೇಶ್ವರ ದೇವಸ್ಥಾನದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ 1.30ಕ್ಕೆ ಬೆಳಗಾವಿಗೆ ಆಗಮಿಸಿ, ಹುಬ್ಬಳ್ಳಿಯ ದಿ.ಪ್ರಕಾಶ ಉಳ್ಳಾಗಡ್ಡಿಮಠ ಅವರ ಪುತ್ರ ರಜತ್ ಉಳ್ಳಾಗಡ್ಡಿಮಠ ಮತ್ತು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಸಹೋದರಿಯ ಪುತ್ರಿ ಸುಶ್ಮಿತಾ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಾತ್ರಿ 8 ಗಂಟೆಗೆ ಏರ್ ಇಂಡಿಯಾ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.

Home add -Advt

 

Related Articles

Back to top button