
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಗುರುವಾರ ಬೆಳಗಾವಿಗೆ ಆಗಮಿಸಲಿದ್ದಾರೆ.

ಇದೇ 20ರಂದು ರಾಹುಲ್ ಗಾಂಧಿ ಬೆಳಗಾವಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಬೆಳಗ್ಗೆ 10.55ಕ್ಕೆ ಬೆಳಗಾವಿಗೆ ಆಗಮಿಸುವ ಅವರು ಸಂಜೆಯವರೆಗೂ ಜಿಲ್ಲೆಯ ಪ್ರಮುಖರ ಜೊತೆ ಸಭೆ ನಡೆಸಲಿದ್ದಾರೆ. 20ರಂದು ರಾಹುಲ ಗಾಂಧಿಯವರ ಬಹಿರಂಗ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಚರ್ಚೆ ನಡಯಲಿದೆ.
ನಂತರ ರಾತ್ರಿ 7.30 ಕ್ಕೆ ಡಿ.ಕೆ.ಶಿವಕುಮಾರ ಅವರು ಬೆಳಗಾವಿಯಿಂದ ಬೆಂಗಳೂರಿಗೆ ತೆರಳಿ, ರಾತ್ರಿ 10.30ಕ್ಕೆ ನವದೆಹಲಿಗೆ ಪ್ರಯಾಣಿಸುವರು. ದೆಹಲಿಯಲ್ಲಿ ಶುಕ್ರವಾರ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆ ನಡೆಯಲಿದೆ. ಇದರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಯಲಿದೆ. ಈ ಸಭೆಯಲ್ಲಿ ಬಹುತೇಕ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ