Kannada NewsKarnataka NewsPolitics

*ಗೊಂದಲದ ವಾತಾವರಣದಲ್ಲಿ ಡಿಕೆಶಿ ಇನ್ನಿಂಗ್ಸ್ ಆರಂಭ: ಬಸವರಾಜ ಬೊಮ್ಮಾಯಿ*

ನೂತನ ಸಚಿವ ಸಂಪುಟ ರಚನೆಯಲ್ಲಿ ಸಿದ್ದರಾಮಯ್ಯ ಮಹತ್ವದ ಪಾತ್ರ: ಬಸವರಾಜ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ: ಡಿ.ಕೆ. ಶಿವಕುಮಾರ್  ಗೊಂದಲದ ವಾತಾವರಣದಲ್ಲಿ ತಮ್ಮ ಇನ್ನಿಂಗ್ಸನ್ನು ಆರಂಭಿಸುತ್ತಿದ್ದಾರೆ. ರಾಜ್ಯದ ಜನತೆ ಈಗಾಗಲೇ ಈ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಅವರಿಗೆ ಅವಕಾಶ ಬಂದಾಗ ಈ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ  ಅಭಿಪ್ರಾಯ ಪಟ್ಟಿದ್ದಾರೆ.

ಖಾಸಗಿ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿನ ನಾಯಕತ್ವ ಬದಲಾವಣೆ ರಾಜ್ಯದ ಆಡಳಿತದಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ ಇದು ಕಾಂಗ್ರೆಸ್ ದುರಾಡಳಿತದ ಮುಂದುವರೆದ ಭಾಗ. ರಾಜ್ಯದ ಆರ್ಥಿಕತೆಯ ವಿಚಾರದಲ್ಲಿ ಈಗಾಗಲೇ ಸಾಕಷ್ಟು ಹಾನಿ ಮಾಡಲಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ ಆಗಿದ್ದು, ವ್ಯವಸ್ಥೆಯನ್ನು ಸುಧಾರಿಸಲು ಡಿ.ಕೆ. ಶಿವಕುಮಾರ್ ಅವರಿಗೆ ಸಮಯ ಸಿಗುತ್ತದೆಯೊ ಇಲ್ಲವೊ ಗೊತ್ತಿಲ್ಲ. ಸಂಪುಟ ರಚನೆಯ ಕಸರತ್ತಿನಲ್ಲಿ ಆಂತರಿಕ ಭಿನ್ನಮತ ಹೊರಬರುತ್ತಿದೆ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಮಾಡದಿರುವುದರಿಂದ ಒಬಿಸಿ ಮತ್ತು ಎಸ್ಸಿ ಎಸ್ಟಿ ಸಮುದಾಯದವರು ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್  ಗೊಂದಲದ ವಾತಾವರಣದಲ್ಲಿ ತಮ್ಮ ಇನ್ನಿಂಗ್ಸನ್ನು ಆರಂಭಿಸುತ್ತಿದ್ದಾರೆ. 

ಕರ್ನಾಟಕದ ಜನತೆ ಈಗಾಗಲೇ ಈ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಮುಂದೆ ಅವರಿಗೆ ಅವಕಾಶ ಬಂದಾಗ ಈ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ ಎಂದು ಹೇಳಿದರು.

Home add -Advt

ಹೊಸ ಸಂಪುಟ ಸೇರಲು ಪ್ರಥಮ ಬಾರಿ ಆಯ್ಕೆಯಾದವರಿಂದ ಹಿಡಿದು ಐದಾರು ಬಾರಿ ಆಯ್ಕೆಯಾದವರೂ ಲಾಬಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿದ್ದ ಸಚಿವರು ಸ್ಥಾನ ಬಿಟ್ಟು ಕೊಡಲು ಸಿದ್ದರಿಲ್ಲ. ಹೀಗಾಗಿ ದೊಡ್ಡ ಮಟ್ಟದ ಪೈಪೋಟಿ ನಡೆಯುತ್ತಿದೆ. ಅಲ್ಲದೇ ನೂತನ ಸಂಪುಟ ರಚನೆಯಲ್ಲಿ ಸಿದ್ದರಾಮಯ್ಯ ಮಹತ್ವದ ಪಾತ್ರ ನಿರ್ವಹಿಸಲಿದ್ದಾರೆ. ಅಲ್ಲದೇ ಅವರು ರಾಜ್ಯ ರಾಜಕಾರಣದಲ್ಲಿಯೇ ಸಕ್ರೀಯರಾಗಿರುತ್ತೇನೆ ಎಂದು ಹೇಳಿರುವುದು ಅಪಾಯಕಾರಿ ಸಂದೇಶವಾಗಿದ್ದು ಇದು ಡಿ.ಕೆ.ಶಿವಕುಮಾರ್ ಮತ್ತು  ಅವರ ಸರ್ಕಾರದ ಮೇಲೆ ತೂಗು ಕತ್ತಿ ನೇತಾಡಿದಂತಾಗುತ್ತದೆ ಎಂದು ಹೇಳಿದರು.

Related Articles

Back to top button