Election NewsKannada NewsKarnataka NewsNationalPolitics

*ಸಿಎಂ ಆದ ಬಳಿಕ ಮೊದಲ ಸಲ ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ಡಿಕೆಶಿ*

ಪ್ರಗತಿವಾಹಿನಿ ಸುದ್ದಿ: ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿ, ಈ ಸಂದರ್ಭದಲ್ಲಿ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. 

ದೆಹಲಿಯ ‘10 ಜನಪಥ್’ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಈ ದೆಹಲಿ ಭೇಟಿಯ ವೇಳೆ ಕೇವಲ ಸೋನಿಯಾ ಗಾಂಧಿ ಮಾತ್ರವಲ್ಲದೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೂ ಉಪಸ್ಥಿತರಿದ್ದರು.

Home add -Advt

ಸಿಎಂ ಆದ ಬಳಿಕ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ ಶಿವಕುಮಾರ್ ಅವರಿಗೆ ಗಾಂಧಿ ಕುಟುಂಬದ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡು ಶುಭ ಹಾರೈಸಿದ್ದಾರೆ.

Related Articles

Back to top button