Belagavi NewsBelgaum NewsKannada NewsKarnataka NewsNationalPolitics
*ಬೆಳಗಾವಿ ಡಿಸಿ ವಿರುದ್ಧ ಕ್ರಮ ಕೈಗೊಳ್ಳದಿರಿ: ಲೋಕಸಭಾ ಸ್ಪೀಕರ್ ಗೆ ಪತ್ರ ಬರೆದ ಜಗದೀಶ್ ಶೆಟ್ಟರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಿರುದ್ಧ ಕ್ರಮ ತೆಗೆದುಕೊಳ್ಳದಂತೆ ಕೋರಿ ಸಂಸದ ಜಗದೀಶ್ ಶೆಟ್ಟರ್ ಅವರು ಪತ್ರ ಬರೆದಿದ್ದಾರೆ.
ಮಹಾರಾಷ್ಟ್ರದ ಸಂಸದ ಧೈರ್ಯಶೀಲ ಎಸ್. ಮಾನೆ ಅವರು ಬೆಳಗಾವಿಯ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಿರುದ್ಧ ನಿಷೇಧಾಜ್ಞೆ ಹೊರಡಿಸಿದರು. ಈ ಕಾರಣಕ್ಕಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಕಚೇರಿಗೆ ವಿಶೇಷಾಧಿಕಾರ ದೂರು ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ವಿರುದ್ಧ ದಾಖಲಾಗಿರುವ ದೂರಿನ ಅನ್ವಯ ಯಾವುದೇ ಕ್ರಮ ಕೈಗೊಳ್ಳದಂತೆ ವಿಷಯವನ್ನು ಪರಿಶೀಲಿಸಬೇಕೆಂದು ನಾನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಸಲ್ಲಿಸುತ್ತೇನೆ ಎಂದು ಸಂಸದರಾದ ಜಗದೀಶ ಶೆಟ್ಟರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

