*ನೀವು ಕೂಡಾ ಪ್ರವಾಸಿ ಮಾರ್ಗದರ್ಶಿ ಆಗಬೇಕೆ: ಇಂದೆ ಅರ್ಜಿ ಸಲ್ಲಿಸಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2024-25 ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಕಿತ್ತೂರು ಕರ್ನಾಟಕ ಭಾಗದ ಬೆಳಗಾವಿ ಜಿಲ್ಲೆಯ ಪ್ರವಾಸಿ ತಾಣಗಳನ್ನು ಉತ್ತೇಜಿಸಿ ಪ್ರಚಾರ ಪಡಿಸಲು ಪರಿಶಿಷ್ಟ ಜಾತಿಯ-14 ಮತ್ತು ಪರಿಶಿಷ್ಟ ಪಂಗಡದ-14 ಅಭ್ಯರ್ಥಿಗಳಿಗೆ ಒಂದು ತಿಂಗಳ ಪ್ರವಾಸಿ ಮಾರ್ಗದರ್ಶಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರ ಕಛೇರಿಯಿಂದ ನಿಗಧಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ, ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ದಿನಾಂಕ: 12-01-2026 ರ ಸಂಜೆ 5-30 ರ ಒಳಗಾಗಿ ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಬೆಳಗಾವಿ ಜಿಲ್ಲೆ, ಬೆಳಗಾವಿ ಸುವರ್ಣ ವಿಧಾನ ಸೌಧ ಕಟ್ಟಡ, ಪೂರ್ವದ್ವಾರ ಪ್ರವೇಶ, ತಳ ಮಹಡಿ, ಕೊಠಡಿ ಸಂಖ್ಯೆ: TP-14, ಹಲಗಾ ಬೆಳಗಾವಿ-590020 ಇಲ್ಲಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0831-2470879 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


