ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಣೆಗೆ ಬಂದಿದ್ದು ಹೇಗೆ ಗೊತ್ತೆ ?‌ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –  ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರತಿ ವರ್ಷ ಮಾರ್ಚ್ 8;ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ.  ಈಗ ನಾವು  47ನೇ ಮಹಿಳಾ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಈ ಬಾರಿ 2022ರಲ್ಲಿ ಸುಸ್ಥಿರ ನಾಳೆಗಾಗಿ ಇಂದು ಲಿಂಗ ಸಮಾನತೆ ಎನ್ನುವ ಧ್ಯೇಯವಾಕ್ಯದೊಂದಗೆ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.
ಮಹಿಳಾ ದಿಚಾರಣೆ ಆಚರಣೆಗೆ ಬಂದಿದ್ದು ಹೇಗೆ ಗೊತ್ತೆ ?‌ 
1975ರಲ್ಲಿ ಮೊದಲ ಬಾರಿಗೆ ವಿಶ್ವಸಂಸ್ಥೆ ಮಾರ್ಚ್​ 8 ರಂದು ಅಧಿಕೃತವಾಗಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಣೆಗೆ ತಂದಿತು. ಅದರೆ. 1908ರ ಫೆಬ್ರವರಿಯಲ್ಲಿಯೇ ಅಂತಾರಾಷ್ಟ್ರೀಯ  ಮಟ್ಟದಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಗಿತ್ತು.
1908ರಲ್ಲಿ ಅಮೆರಿಕದಲ್ಲಿ ಕಾರ್ಮಿಕ ಚಳವಳಿ ನಡೆದಿತ್ತು.  ದುಡಿಯುವ ಮಹಿಳೆಯರು  ಅವರ ಹಕ್ಕಿನ ಪರವಾಗಿ ಧ್ವನಿಯೆತ್ತಿದ್ದರು‌ ಸುಮಾರು 15,000 ಮಹಿಳೆಯರು ನ್ಯೂಯಾರ್ಕ್ ಬೀದಿಗಳಲ್ಲಿ ಮೆರವಣಿಗೆ ನಡೆಸಿದ್ದರು. ತಮ್ಮ ಕೆಲಸದ ಅವಧಿಯನ್ನು ಕಡಿಮೆ ಮಾಡಿ ವೇತನದ ಶ್ರೇಣಿಯನ್ನು ಹೆಚ್ಚಿಸಬೇಕು. ಮಹಿಳೆಯರಿಗೂ ಮತದಾನದ ಹಕ್ಕನ್ನು ನೀಡಬೇಕೆಂದು ಬೇಡಿಕೆಯಿಟ್ಟಿದ್ದರು.
ಇದೇಕಾರಣಕ್ಕಾಗಿ, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ್ 8 ರಂದು ಪ್ರಾರಂಭಿಸಲಾಯಿತು. ನಂತರ 1975 ರಲ್ಲಿ ವಿಶ್ವಸಂಸ್ಥೆಯು ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸಲು ಅಧಿಕೃತವಾಗಿ ಘೋಷಣೆ ಮಾಡಿತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button