
ಪ್ರಗತಿವಾಹಿನಿ ಸುದ್ದಿ, ಮೈಸೂರು – ಈಗಾಗಲೇ ನಾಪತ್ರ ಸಲ್ಲಿಸುತ್ತಿದ್ದಾರೆ. ರಾಜ್ಯದಲ್ಲಿ ಸುದ್ದಿಯಲ್ಲಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೂಡ ನಾಮಪತ್ರ ಸಲ್ಲಿಸಿದ್ದು, ಮೈಸೂರು ರಾಜರ ಬಳಿ ಎಷ್ಟು ಆಸ್ತಿ ಇರಬಹುದು ಎಂದು ಜನರಲ್ಲಿ ಕುತೂಹಲ ಇತ್ತು ಆದರೆ ಆ ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ.
ಸೋಮವಾರ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಏಪ್ರಿಲ್ 3ರಂದು ಬೃಹತ್ ರ್ಯಾಲಿ ಮೂಲಕ ಅವರು ನಾಮಪತ್ರ ಸಲ್ಲಿಸಲಿದ್ದಾರೆ.
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಹಾರಾಜ ಆಗಿದ್ದರೂ ಸಹ ಅವರು ಯಾವುದೇ ಕೃಷಿ ಭೂಮಿ, ಸ್ವಂತ ಮನೆ ಹೊಂದಿಲ್ಲ. ವಾಣಿಜ್ಯ ಕಟ್ಟಡಗಳಿಲ್ಲ. ಬ್ಯಾಂಕ್ ನಿಂದ ಸಾಲ ಸಹ ಪಡೆದಿಲ್ಲ. ಹಾಗೇ ಯಾವುದೇ ರೀತಿಯ ಆದಾಯ ತೆರಿಗೆ ಹಣ ಬಾಕಿ ಉಳಿಸಿಕೊಂಡಿಲ್ಲ. ಜೊತೆಗೆ ಬಿಜೆಪಿ ಅಭ್ಯರ್ಥಿ ಯದುವೀರ್ ವಿರುದ್ಧ ಯಾವ ಪ್ರಕರಣ ದಾಖಲಾಗಿಲ್ಲ.
*ಮೈಸೂರು ಮಹಾರಾಜರ ಆಸ್ತಿ ವಿವರ*
ಯದುವೀರ್ ಒಡೆಯರ್ ಅವರ ಚರಾಸ್ತಿ ಮೌಲ್ಯ 4,99,59,303 ರೂ. ಹಾಗೂ ಅವರ ಬಳಿ ಕೈಯಲ್ಲಿ ಒಂದು ಲಕ್ಷ ರೂ. ನಗದು ಇದೆ. ಅವರ 2 ಬ್ಯಾಂಕ್ ಖಾತೆಗಳಲ್ಲಿ 23.55 ಲಕ್ಷ ಹಣ ಇದೆ. ಒಂದು ಕೋಟಿ ಮೌಲ್ಯದ ವಿವಿಧ ಕಂಪನಿಗಳಲ್ಲಿ ಬಾಂಡ್ ಮತ್ತು ಶೇರ್ ಹೊಂದಿದ್ದಾರೆ. 4 ಕೆಜಿ ಚಿನ್ನ ಮತ್ತು 20 ಕೆಜಿ ಬೆಳ್ಳಿ ಇದೆ ಎಂದು ಘೋಷಿಸಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ