GIT add 2024-1
Laxmi Tai add
Beereshwara 33

ಅಂತಿಮ ನಿರ್ಧಾರಕ್ಕೆ ಮುನ್ನಾದಿನ ಸುಮಲತಾ ಹಾಕಿದ ಪೋಸ್ಟ್ ಏನು ಗೊತ್ತೇ?

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ, ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರ ಈ ಬಾರಿ ಕುತೂಹಲದ ಕಣವಾಗಿದೆ. ಕಳೆದ ಬಾರಿ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಸುಮಲತಾ ಅಂಬರೀಶ್ ಕುತೂಹಲದ ಕೇಂದ್ರವಾಗಿದ್ದಾರೆ.

ಬಿಜೆಪಿ ಜೊತೆ ಗುರುತಿಸಿಕೊಂಡಿರುವ ಸುಮಲತಾಗೆ ಈ ಬಾರಿ ಟಿಕೆಟ್ ತಪ್ಪಿಸಿ, ಜೆಡಿಸ್ ಜೊತೆಗಿನ ಒಪ್ಪಂದದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಟಿಕೆಟ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸುಮಲತಾ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವ ಕುತೂಹಲ ಲ್ಲರಲ್ಲಿದೆ.

Emergency Service

ಬುಧವಾರ ಅಂತಿಮ ನಿರ್ಧಾರ ಪ್ರಕಟಿಸಲು ಸುಮಲತಾ ಅಬಿಮಾನಿಗಳ ಸಭೆ ಕರೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಹೀಗಿದೆ ಪೋಸ್ಟ್ –

ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ. ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಗಂಭೀರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇಳಿದ್ದೇನೆ. ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆವರೆಗೂ ಬಂದಿದ್ದೀರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು. ಯಾವತ್ತೂ ಅದು ಹಾಗೆಯೇ ಇರಲಿ ಎಂದು ಆಶಿಸುವೆ. ನಾಳೆ (ಏಪ್ರಿಲ್ 3) ಬೆಳಗ್ಗೆ 10 ಗಂಟೆಗೆ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟ ಪಡಿಸುವ ಹಾಗೂ ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಪ್ರಕಟಿಸುತ್ತಿದ್ದೇನೆ. ಅಂದು ನಮ್ಮೊಂದಿಗೆ ನಮ್ಮೆಲ್ಲರ ಪ್ರೀತಿಯ ದರ್ಶನ್, ಅಭಿಷೇಕ್ ಅಂಬರೀಶ್ ಇರಲಿದ್ದಾರೆ. ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಬನ್ನಿ, ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ. #ನನ್ನಹೆಜ್ಜೆಮಂಡ್ಯಕ್ಕಾಗಿ Jai Hind Jai Karnataka Jai Mandya

Bottom Add3
Bottom Ad 2