Kannada NewsKarnataka NewsUncategorized

ರಾಜ್ಯದ ಅತೀ ದೊಡ್ಡ ಮತ ಎಣಿಕೆ ಕೇಂದ್ರ ಎಲ್ಲಿದೆ ಗೊತ್ತೇ?

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ೧೮ ವಿಧಾನಸಭಾ ಮತಕ್ಷೇತ್ರದ ಮತ ಎಣಿಕೆಗೆ ಬೆಳಗಾವಿಯ ಆರ್ ಪಿಡಿ ಕಾಲೇಜಿನಲ್ಲಿ ಸಕಲ ಸಿದ್ಧತೆ ಮಾಡಲಾಗಿದ್ದು, ಮಧ್ಯಾಹ್ನದ ವೇಳೆಗೆ ಎಲ್ಲ ಫಲಿತಾಂಶ ಬರುವ ಸಾಧ್ಯತೆ ಇದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.

ಶುಕ್ರವಾರ ನಗರದ ಆರ್ ಪಿಡಿ ಕಾಲೇಜನಲ್ಲಿ ಸ್ಥಾಪನೆ ಮಾಡಲಾದ ಸ್ಟ್ರಾಂಗ್ ರೂಂ ಬಳಿ ಸುದ್ದಿಗಾರರೊಂದಿಗೆ ಮಾತ‌ನಾಡಿದ ಅವರು, ರಾಜ್ಯದಲ್ಲಿ ಅತಿ ದೊಡ್ಡ ಮತ ಏಣಿಕೆ ಕೇಂದ್ರ ಆರ್ ಪಿಡಿ ಕಾಲೇಜಿನಲ್ಲಿ ಮಾಡಲಾಗಿದೆ. ಮೊದಲಿಗೆ ೮ ಗಂಟೆಗೆ ಪೋಸ್ಟಲ್ ಬ್ಯಾಲೆಟ್ ಪೇಪರ್ ಕೌಂಟಿಗ್ ಮಾಡಲಾಗುವುದು. ೮.೩೦ರಿಂದ ಇವಿಎಂ ಮತ ಎಣಿಕೆ ಪ್ರಾರಂಭವಾಗುತ್ತದೆ. ಒಂದು ಟೇಬಲ್ ನಲ್ಲಿ ೫೦೦ ಮತಗಳನ್ನು ಎಣಿಕೆ ಮಾಡಲು ಸಾಧ್ಯವಾಗುತ್ತದೆ. ಮಧ್ಯಾಹ್ನದವರೆಗೆ ಎಲ್ಲ ಫಲಿತಾಂಶ ಹೊರ ಬರುವ ಸಾಧ್ಯತೆ ಇದೆ ಎಂದರು.

ಮೂರು ಹಂತದಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಗುರುತಿನ ಚೀಟಿ ಇಲ್ಲದೆ ಯಾರಿಗೂ ಒಳಗಡೆ ಬಿಡುವುದಿಲ್ಲ. ಸುಮಾರು ೫ ಸಾವಿರ ಜನ ಇರುವುದರಿಂದ ಏಜೆಂಟರಿಗೂ ಗುರುತಿನ ಚೀಟಿ ನೀಡಲಾಗಿದೆ. ೨೦೦ ಮೀಟರ್ ಹೊರಗಡೆ ಅಭ್ಯರ್ಥಿಗಳ ಬೆಂಬಲಿಗರು ವಿಜಯೋತ್ಸವ ಮಾಡಬಹುದು ಎಂದರು.

ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ.ಬೋರಲಿಂಗಯ್ಯ ಮಾತನಾಡಿ, ಮೇ.೧೩ ರಂದು ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸ್ಟ್ರಾಂಗ್ ರೂಂ ಹೊರಗಡೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ೧೮ ವಿಧಾನಸಭಾ ಕ್ಷೇತ್ರದ ಜನರು ಬರುತ್ತಾರೆ. ಕೌಂಟಿಗ್ ಏಜೆಂಟ್, ಅಧಿಕಾರಿಗಳು ಸೇರಿದಂತೆ ಸುಮಾರು ೫ ಸಾವಿರ ಜನ ಆಗಮಿಸುವ ಸಾಧ್ಯತೆ ಇದೆ. ಆದ್ದರಿಂದ ನಗರ ಪೊಲೀಸ್ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ನಾಳೆ ಬೆಳಗ್ಗೆ ೫ ಗಂಟೆಯಿಂದ ಪೊಲೀಸ್ ಸಿಬ್ಬಂದಿಗಳು ಮತ ಎಣಿಕೆ ಕೇಂದ್ರದ ಸುತ್ತ ಕೆಎಸ್ ಆರ್ ಪಿ ತುಕಡಿ ಸೇರಿದಂತೆ ಸುಮಾರು ೧,೫೦೦ ಜನ ಸಿಬ್ಬಂದಿಗಳನ್ನು ನೇಮಕ ಮಾಡಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಲ್ಲಲ್ಲಿ ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಇದ್ದರು.

https://pragati.taskdun.com/view-election-results-from-where-you-are-here-is-the-link/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button