
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರವಾಗಿದ್ದರೂ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ.