Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ವೈದ್ಯರ ನಿರ್ಲಕ್ಷ್ಯ; ಬಾಣಂತಿ, ಮಗು ಇಬ್ಬರೂ ಸಾವು*

ಪ್ರಗತಿವಾಹಿನಿ ಸುದ್ದಿ: ಮಗುವಿಗೆ ಜನ್ಮ ನೀಡಿದ ಕೆಲವೇ ಸಮಯದಲ್ಲಿ ಬಾಣಂತಿ ಹಾಗೂ ಮಗು ಇಬ್ಬರೂ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

Home add -Advt

ಬೆಳಗಾವಿಯ ಸಂತಿಬಸ್ತಿವಾಡ ಗ್ರಾಮದ ಲಕ್ಷ್ಮೀ ಹಳ್ಳಿ (28)ಗೆ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ನಿನ್ನೆ ರಾತ್ರಿ ಕಿಣೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಲಕ್ಷ್ಮೀ ಹೆಣ್ಣುಮಗುವಿಗೆ ಜನ್ಮ ನೀಡಿದ್ದರು.

ಆದರೆ ಬಾಣಂತಿ ಲಕ್ಷ್ಮೀಗೆ ತೀವ್ರ ರಕ್ತಸ್ರಾವ ಆರಂಭವಾಗಿತ್ತು. ಇದರಿಂದ ವೈದ್ಯರು ಬೆಳಗಾವಿ ಭಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ವೈದ್ಯರ ಸಲಹೆಯಂತೆ ಬಾಣಂತಿ, ಮಗುವನ್ನು ಭಿಮ್ಸ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆಯೇ ಬಾಣಂತಿ ಹಾಗೂ ಮಗು ಸಾವನ್ನಪ್ಪಿದ್ದಾರೆ.

ಇದರಿಂದ ನೊಂದ ಕುಟುಂಬದವರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಣಂತಿ ಮಗು ಸಾವಿಗೆ ವೈದ್ಯರ ಬೇಜವಾಬ್ದಾರಿ, ನಿರ್ಲಕ್ಷ್ಯವೇ ಕಾರಣ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ ಗ್ರಾಮೀಣ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button