Latest

ಉತ್ತಮ  ಬಜೆಟ್ ಮಂಡನೆಗೆ ಯತ್ನ -ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ, ಹಾಸನ: ರಾಜ್ಯಕ್ಕೆ ಹೆಚ್ಚಿನ ಅನುದಾನ ತರುವ ನಿಟ್ಟಿನಲ್ಲಿ ಮತ್ತೊಮ್ಮೆ ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಸಲ್ಲಿಸಲಾಗುವುದು.  ಈ ನಿಟ್ಟಿನಲ್ಲಿ ಚರ್ಚಿಸಲು ನಾಲ್ಕೈದು ದಿನಗಳಲ್ಲಿ ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಹಾಸನ ಜಿಲ್ಲೆ ಬೇಲೂರು ಬಳಿಯ ಪುಷ್ಪಗಿರಿ ಉತ್ಸವದಲ್ಲಿ ಪಾಲ್ಗೊಂಡು ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿ ಗಮನಕ್ಕೆ ತಂದಿದ್ದೇವೆ. ಮೋದಿಯವರು ದೆಹಲಿಗೆ ಬಂದು ಎಲ್ಲ ವಿಷಯಗಳ ಬಗ್ಗೆ ಚರ್ಚಿಸಿ ಎಂದಿದ್ದಾರೆ. ಹಾಗಾಗಿ ನಾಲ್ಕೈದು ದಿನಗಳಲ್ಲಿ ದೆಹಲಿಗೆ ತೆರಳಿ ನೆರೆ ಪರಿಹಾರ, ರಾಜ್ಯಕ್ಕೆ ಹೆಚ್ಚಿನ ಅನುದಾನ ಹಾಗೂ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದರು.

ಇದೇ ವೇಳೆ ವಾಲ್ಮೀಕಿ ಸಮುದಾಯಕ್ಕೆ ಡಿಸಿಎಂ ಸ್ಥಾನ ನೀಡುವ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಈ ಕುರಿತು ಆ ಸಮುದಾಯದ ಸ್ವಾಮಿಜಿ ಹಾಗೂ ಶಾಸಕರ ಜತೆ ಮಾತನಾಡಿ ನಿರ್ಧರಿಸುವುದಾಗಿ ತಿಳಿಸಿದರು.

ಮುಂದಿನ ವಾರದಿಂದ ಬಜೆಟ್ ಸಿದ್ಧತೆ ಮಾಡಲಾಗುವುದು. ರಾಜ್ಯದ ರೈತರ ಹಿತ ಕಾಪಾಡುವ ದೃಷ್ಟಿಯಿಂದ ರೈತರ ಉತ್ಪನ್ನಗಳಿಗೆ ಉತ್ತೇಜನ, ನೀರಾವರಿ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಅಲ್ಲದೇ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ತೀರ್ಮಾನಿಸಲಾಗಿದೆ. ಉತ್ತಮ  ಬಜೆಟ್ ಮಂಡನೆಗೆ ಯತ್ನಿಸುತ್ತೇನೆ ಎಂದು ಹೇಳಿದರು.

Home add -Advt

Related Articles

Back to top button